

ಮೈಸೂರು: ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ನಾರಿ ನ್ಯಾಯ ಐದು ಗ್ಯಾರಂಟಿಗಳು ಮಹಿಳೆಯರ ಸ್ವಾವಲಂಬನೆ ಮತ್ತು ರಕ್ಷಣೆಗೆ ಒತ್ತು ನೀಡಲಿವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ‘ನಾರಿ ನ್ಯಾಯ’ ಗ್ಯಾರಂಟಿ ಪೋಸ್ಟರ್ ಅನ್ನು ಅನಾವರಣಗೊಳಿಸಿ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕ ರಾಹುಲ್ ಗಾಂಧಿ ಅವರು ಘೋಷಿಸಿರುವ ಗ್ಯಾರಂಟಿಗಳು ದೇಶದ ಅರ್ಧದಷ್ಟು ಮಹಿಳೆಯರಿಗೆ ನ್ಯಾಯ ದೊರಕಿಸಲಿವೆ ಎಂದರು.
ಶೇ.50ರಷ್ಟ ಮೀಸಲಾತಿ: ಮಹಾಲಕ್ಷ್ಮಿಗ್ಯಾರಂಟಿಯಲ್ಲಿ ಬಡ ಕುಟುಂಬಕ್ಕೆ ವಾರ್ಷಿಕ 1 ಲಕ್ಷ ರೂ. ಕೊಡುವುದಾಗಿ ಘೋಷಣೆ ಮಾಡಿದ್ದೇವೆ. ಅಧಿಕಾರ ಮೈತ್ರಿ ಮೂಲಕ ದೌರ್ಜನ್ಯಕ್ಕೆ ತುತ್ತಾದ ಹೆಣ್ಣು ಮಕ್ಕಳಿಗೆ ಕಾನೂನಿನ ನೆರವು ದೊರೆಯಲಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಕೀಲರನ್ನು ನೇಮಕ ಮಾಡಲಾಗುತ್ತಿದೆ. ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ, ಆಶಾ ಕಾರ್ಯಕರ್ತೆಯರ ಸಂಬಳ ದ್ವಿಗುಣ, ಉದ್ಯೋಗನಿರತ ಮಹಿಳೆಯರಿಗಾಗಿ ಅಕ್ಷರದ್ವ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.