

ಗಂಗಾವತಿ: ಸ್ವ ಉದ್ಯೋಗದೊಂದಿಗೆ ಆರ್ಥಿಕಾಭಿವೃದ್ಧಿಗೆ ಒತ್ತು ನೀಡಬೇಕಿದ್ದು, ಉಳಿತಾಯದತ್ತ ಗಮನಹರಿಸುವಂತೆ ನಗರಸಭೆ ಸದಸ್ಯ ಮನೋಹರಸ್ವಾಮಿ ಹಿರೇಮಠ ಹೇಳಿದರು.
ನಗರದ ಮಹೆಬೂಬ್ ನಗರದ ಜ್ಞಾನವಿಕಾಸ ಕೇಂದ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ವಿನಾಯಕನಗರ ವಲಯದಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಮತ್ತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಸಂಸ್ಥೆ ಬಡ ಮತ್ತು ಮಧ್ಯಮ ವರ್ಗವನ್ನು ಆರ್ಥಿಕವಾಗಿ ಸದೃಢಗೊಳಿಸುತ್ತಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ಹಾಗೂ ವಕೀಲೆ ರಾಜೇಶ್ವರಿ ಸುರೇಶ ಮಾತನಾಡಿ, ಕಾನೂನಿನ ಅರಿವು ಮೂಲಕ ವಹಿವಾಟು ನಡೆಸಲು ಮುಂದಾಗಬೇಕಿದ್ದು, ಕ್ರೀಯಾಶೀಲ ಚಟುವಿಟಕೆ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.
ಸಂಸ್ಥೆ ಬೆಳವಣಿಗೆ, ಜ್ಞಾನ ವಿಕಾಸ ಕಾರ್ಯಕ್ರಮಗಳ ಉದ್ದೇಶ ಮತ್ತು ಪ್ರಯೋಜನ ಕುರಿತು ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಮಾತನಾಡಿದರು. ಜ್ಞಾನ ಸಮನ್ವಯಾಧಿಕಾರಿ ಶಾರದಾ, ವಲಯದ ಅಧ್ಯಕ್ಷೆ ನಾಗಲಕ್ಷ್ಮೀ, ಮೇಲ್ವಿಚಾರಕಿ ಸರೋಜಾ, ಸೇವಾ ಪ್ರತಿನಿಧಿ ರಾಜೇಶ್ವರಿ ಇತರರಿದ್ದರು.