ಕನ್ನಡವನ್ನು ಉತ್ತುಂಗ್ಕಕೆ ಕೊಂಡೊಯ್ಯಲು ಒತ್ತು ನೀಡಿ

ಕನ್ನಡವನ್ನು ಉತ್ತುಂಗ್ಕಕೆ ಕೊಂಡೊಯ್ಯಲು ಒತ್ತು ನೀಡಿ
Published on

ಗಂಡಸಿ: ಜಗತ್ತಿನಲ್ಲಿ ಕನ್ನಡಕ್ಕೆ ತನ್ನದೆ ಆದ ಸ್ಥಾನಮಾನಗಳಿದ್ದು, ಪ್ರತಿಯೊಬ್ಬರೂ ಕನ್ನಡವನ್ನು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಒತ್ತು ನೀಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಮಲ್ಲೇಶ್ ಗೌಡ ಹೇಳಿದರು.

ಗಂಡಸಿ ಹೋಬಳಿ ಮಟ್ಟದ ಶಾಲಾ ಕಾಲೇಜುಗಳಲ್ಲಿ ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಗಂಡಸಿ ಹೋಬಳಿ ಘಟಕದಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರಿ.ಪೂರ್ವ 5ನೇ ಶತಮಾನದಲ್ಲೇ ಕನ್ನಡ ಭಾಷೆ ಬಳಕೆಯಲ್ಲಿತ್ತು ಎಂಬುದಕ್ಕೆ ಆಧಾರಗಳಿದ್ದು, 2500 ವರ್ಷಗಳ ಇತಿಹಾಸ ಹೊಂದಿರುವ ಭಾಷೆಯಾಗಿದೆ. ಕನ್ನಡ ಭಾಷೆಯ ಲಿಪಿ ದೊರೆತಿದ್ದು, ಹಾಸನ ಜಿಲ್ಲೆಯ ಹಲ್ಮಿಡಿಯಲ್ಲಿ ಕ್ರಿ.ಶ 450ರಲ್ಲಿ 6 ಮತ್ತು 7 ನೇ ಶತಮಾನದಲ್ಲಿ ಕನ್ನಡ ಸಾಹಿತ್ಯದಲ್ಲಿ ಕೃತಿಗಳು ರಚನೆಯಾಗಿವೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಬಾಬು, ಮಾಜಿ ಅಧ್ಯಕ್ಷ ಶಿವಮೂರ್ತಿ, ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್, ಶಂಭುಲಿಂಗೇಶ್ವರ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ಮುಖ್ಯ ಶಿಕ್ಷಕಿ ಮಮತಾ, ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವಿರೂಪಾಕ್ಷಪ್ಪ, ಬೀರೇಶ್, ನಾಗಭೂಷಣ್, ಮುಮ್ಮಿನ, ಶಾಂತಕುಮಾರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net