

ಬೈಂದೂರು: ಆದಿವಾಸಿ ನಾಯಕ ಬಿರ್ಸಾ ಮುಂಡಾ ಜನ್ಮದಿನ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿ ಪಿಎಂ ಜನಮನ್ ಯೋಜನೆಗೆ ಚಾಲನೆ ನೀಡಿದ್ದು, ಈ ಮೂಲಕ ಆದಿವಾಸಿ ಸಮುದಾಯ ಅಭಿವೃದ್ಧಿ, ಮೂಲಸೌಕರ್ಯಗಳಿಗೆ ಒತ್ತು ನೀಡಲಾಗಿದೆ ಎಂದು ಸಂಸದ ಬಿ.ವೈ.ರಾವೇಂದ್ರ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಜನ್‌ಜಾ ಆದಿವಾಸಿ ನ್ಯಾಯಾ ಮಹಾ ಅಭಿಯಾನ್ ಯೋಜನೆಯಡಿಯಲ್ಲಿ ಆತ್ರಾಡಿ ಪಿವಿಟಿಜಿ ಹ್ಯಾಮೈಟ್ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 198.48 ಲಕ್ಷ ರೂ. ಮಂಜೂರಾಗಿದ್ದು, ಬುಧವಾರ ಭೂಮಿಪೂಜೆ ನೆರವೇರಿಸಿ ವಾತನಾಡಿದರು. ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ವಾತನಾಡಿದರು. ನಂದ್ರೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಸದಸ್ಯರಾದ ಉದಯಕುವಾರ್ ಶೆಟ್ಟಿ, ಶಶಿಕಲಾ ಎಸ್., ಸುಬ್ಬು, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ., ನಿಕಟಪೂರ್ವ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುವಾರ್ ಶೆಟ್ಟಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕರುಣ್ ಪೂಜಾರಿ, ಉಪಾಧ್ಯಕ್ಷ ರಾವೇಂದ್ರ ನೆಂಪು, ನಂಡ್ರೆ ಭಾಗದ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು. ಸುರೇಶ ಐತಾಳ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ಬೈಂದೂರು ಕ್ಷೇತ್ರದಲ್ಲಿ ಪಿಎಂ ಜನಮನ್ ಯೋಜನೆಯಲ್ಲಿ 4.89 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ವಾಣವಾಗುತ್ತಿದೆ. 1.80 ಕೋಟಿ ರೂ. ವೆಚ್ಚದಲ್ಲಿ ಎಂಪಿಸಿ ಹಾಲ್‌ಗಳ ನಿರ್ವಾಣವಾಗುತ್ತಿದೆ. ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳು ಅನುಷ್ಠಾನವಾಗುತ್ತಿದೆ. ಬಿ.ವೈ.ರಾವೇಂದ್ರ, ಸಂಸದ. ಸಂಸದರು ಕೇಂದ್ರದ ಮೂಲಕ ಬೈಂದೂರು ಕ್ಷೇತ್ರಕ್ಕೆ ಸಾಕಷ್ಟು ಅನುದಾನಗಳನ್ನು ಒದಗಿಸಿಕೊಟ್ಟಿದ್ದಾರೆ. ಪ್ರಧಾನಮಂತ್ರಿ ಜನ್‌ಜಾತ ಆದಿವಾಸಿ ನ್ಯಾಯಾ ಮಹಾ ಅಭಿಯಾನ್ ಯೋಜನೆಯಡಿಯಲ್ಲಿ ಬೈಂದೂರು ಕ್ಷೇತ್ರಕ್ಕೆ ಮಹತ್ವದ ಅನುದಾನ ಒದಗಿಸಿದ್ದಾರೆ. ಈ ಭಾಗದ ಗ್ರಾಮೀಣ ರಸ್ತೆಗೆ ಇದರಿಂದ ಕಾಯಕಲ್ಪ ದೊರೆಯಲಿದೆ. ಗುರುರಾಜ ಶೆಟ್ಟಿ ಗಂಟಿಹೊಳೆ, ಶಾಸಕ.