ಸ್ವದೇಶಿ ವಸ್ತುಗಳ ಬಳಕೆಗೆ ಇರಲಿ ಒತ್ತು

blm (1)
Published on

ವಿಜಯವಾಣಿ ಸುದ್ದಿಜಾಲ ಕಾರ್ಕಳ

ದೇಶಕ್ಕೆ ಸ್ವಾತಂತ್ರ್ಯ ಬಂದರೂ ದೇಶ ಇನ್ನೂ ಸಂಪೂರ್ಣ ಸ್ವಾವಲಂಬಿಯಾಗಿಲ್ಲ, ನಾವೆಲ್ಲರೂ ಸ್ವದೇಶಿ ವಸ್ತುಗಳ ಬಳಕೆಗೆ ಒತ್ತು ನೀಡಬೇಕು, ನಮ್ಮ ಸ್ಥಳೀಯ ಕೈಗಾರಿಕೆ, ವ್ಯಾಪಾರ ಉದ್ಯಮಗಳಿಗೆ ನಾವು ಹೆಚ್ಚಿನ ಬೆಂಬಲ ನೀಡಬೇಕು ಹಾಗೂ ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ. ವಿದೇಶಿ ವಸ್ತುಗಳ ಮೋಹವನ್ನು ಬಿಟ್ಟು ಸ್ವದೇಶಿ ವಸ್ತುಗಳ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದರು.

ಕಾರ್ಕಳ ಶಾಸಕರ ವಿಕಾಸ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಾಗಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಆತ್ಮನಿರ್ಭರ ಭಾರತದ ಅಭಿಯಾನದ ಜಿಲ್ಲಾ ವಕ್ತಾರ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯರಾಮ್ ಸಾಲಿಯಾನ್, ಮಾಲಿನಿ ಜೆ.ಶೆಟ್ಟಿ, ಸುರೇಶ ಶೆಟ್ಟಿ ಶಿವಪುರ, ರಮೇಶ್ ಶೆಟ್ಟಿ ಶಿವಪುರ, ಮಂಡಲ ಪದಾಕಾರಿಗಳು, ವಿವಿಧ ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೂತ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಡಲ ಸಂಚಾಲಕ ಅನಂತಕೃಷ್ಣ ಶೆಣೈ ಸ್ವಾಗತಿಸಿದರು, ರವೀಂದ್ರ ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ಸಾಲಿಯಾನ್ ಪ್ರತಿಜ್ಞಾ ವಿಧಿ ಬೋಧಿಸಿದರು, ಬೋಳ ಸತೀಶ್ ಪೂಜಾರಿ ವಂದಿಸಿದರು. ಹರ್ಷವರ್ಧನ್ ನಿಟ್ಟೆ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net