ಸಲಹೆ, ಸಹಕಾರ ನೀಡಿ ಕಾಂಗ್ರೆಸ್ ಸಂಘಟನೆಗೆ ಒತ್ತು ನೀಡಿ

28M.D.R.2
Published on

ಮದ್ದೂರು: ತೈಲೂರು ಗ್ರಾಮದವರನ್ನು ಗುರುತಿಸಿ ಉತ್ತಮ ಸ್ಥಾನಮಾನಗಳನ್ನು ನೀಡಿದ್ದು, ಈ ಭಾಗದ ನಿವಾಸಿಗಳು, ಮುಖಂಡರು ಅವರ ಬೆನ್ನೆಲುಬಾಗಿ ನಿಂತು ಸಲಹೆ, ಸಹಕಾರ ನೀಡುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.


ತಾಲೂಕಿನ ತೈಲೂರು ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನೂತನ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು ಹಾಗೂ ಪುರಸಭೆ ಉಪಾಧ್ಯಕ್ಷ ಅಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದರು.


ತಮ್ಮದೇ ಗ್ರಾಮದವರಾದ ಪ್ರಸನ್ನಕುಮಾರ್ ಹಾಗೂ ಚಲುವರಾಜು ಅವರಿಗೆ ಪಕ್ಷವು ಗುರುತಿಸಿ ಉತ್ತಮ ಸ್ಥಾನಮಾನಗಳನ್ನು ನೀಡುವುದರ ಮೂಲಕ ಈ ಭಾಗದ ಜನರ ಒತ್ತಾಸೆಯಾಗಿ ನಿಲ್ಲುವ ಅವಕಾಶವನ್ನು ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಇವರೊಂದಿಗೆ ನಿರಂತರ ವಾಗಿ ಕೈಜೋಡಿಸಬೇಕೆಂದು ಮನವಿ ಮಾಡಿದರು.


ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ನಾನು ತಾಪಂ ಸದಸ್ಯರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ನಿರಂತರವಾಗಿ ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದು, ತಮ್ಮ ಕಾರ್ಯ ವೈಖರಿಯನ್ನು ಮೆಚ್ಚಿ ಶಾಸಕರು ಜವಾಬ್ದಾರಿಯುತ ಸ್ಥಾನ ನೀಡಿದ್ದು, ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಪಕ್ಷಕ್ಕೆ ಒಳ್ಳೆಯ ಹೆಸರು ತರುವ ಜತೆಗೆ ಜನಪರವಾಗಿ ಕೆಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಪುರಸಭೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಟಿ.ಆರ್.ಪ್ರಸನ್ನಕುಮಾರ್ ಹಾಗೂ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು ಅವರನ್ನು ಅಭಿನಂದಿಸಲಾಯಿತು. ಗ್ರಾಪಂ ಅಧ್ಯಕ್ಷೆ ಸರಸ್ವತಮ್ಮ. ಸದಸ್ಯರಾದ ಟಿ.ಆರ್.ನಂದೀಶ್‌ಕುಮಾರ್, ಎಂಪಿಸಿಎಸ್ ಅಧ್ಯಕ್ಷ ಪ್ರಸನ್ನ, ಮುಖಂಡರಾದ ಗಿರೀಶ್, ತೈಲೂರು ರಘು, ಸತೀಶ್, ಆನಂದ್, ಗುರುಪ್ರಸಾದ್, ರಾಜೇಶ್, ಲೋಕೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net