ಬೂತ್ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಿ

LXR BJP NONDANI
Published on

ಲಕ್ಷೆ್ಮೕಶ್ವರ: ಜಗತ್ತಿನಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿ ಆಗಿದ್ದು, ಕೋಟ್ಯಂತರ ಕಾರ್ಯಕರ್ತರ ಪಡೆಯನ್ನು ಪಕ್ಷ ಹೊಂದಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಪಟ್ಟಣದಲ್ಲಿ ಶಿರಹಟ್ಟಿ ಬಿಜೆಪಿ ಮಂಡಳ, ಲಕ್ಷೆ್ಮೕಶ್ವರ ನಗರ ಘಟಕ ಹಾಗೂ ಯುವ ಮೋರ್ಚಾ ವತಿಯಿಂದ ಶನಿವಾರ ಏರ್ಪಡಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಲಿಷ್ಟ ರಾಷ್ಟ್ರ ನಿರ್ವಣಕ್ಕೆ ಪ್ರತಿಯೊಬ್ಬರೂ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದುಕೊಳ್ಳಬೇಕು. ಪಕ್ಷದ ಕಾರ್ಯಕರ್ತರು ಹೆಚ್ಚೆಚ್ಚು ಸದಸ್ಯತ್ವವನ್ನು ಮಾಡಿ ಬೂತ್ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಯುವ ಸಮೂಹವನ್ನು ಬಿಜೆಪಿಯತ್ತ ಸೆಳೆಯಲು ಕಾರ್ಯಕರ್ತರು ಶ್ರಮಿಸಿ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಬೇಕು ಎಂದರು. ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಪುರಸಭೆ ಅಧ್ಯಕ್ಷೆ ಹಾಲಿ ಸದಸ್ಯೆ ಅಶ್ವಿನಿ ಅಂಕಲಕೋಟಿ, ಜಿಲ್ಲಾ ಪ್ರ.ಕಾರ್ಯದರ್ಶಿ ಫಕೀರೇಶ ರಟ್ಟಿಹಳ್ಳಿ, ಶಿರಹಟ್ಟಿ ಮಂಡಳ ಪ್ರ.ಕಾರ್ಯದರ್ಶಿ ಅನಿಲ ಮುಳಗುಂದ, ನಗರ ಅಧ್ಯಕ್ಷ ನವೀನ ಬೆಳ್ಳಟ್ಟಿ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಚಕ್ರಸಾಲಿ, ವಿಠಲ ಬದಿ ಸೇರಿ ನೂರಾರು ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net