ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ

29,kkr1(5-25
Published on

ಕಿಕ್ಕೇರಿ: ಶಾಲಾ ಶಿಕ್ಷಣ ಇಲಾಖೆ ತಾಲೂಕಿನಲ್ಲಿ ದೊಡ್ಡ ಹೋಬಳಿ ಕೇಂದ್ರವಾಗಿರುವ ಇಲ್ಲಿನ ಶಾಲಾ ಕಾಲೇಜು ಬಲವರ್ಧನೆಗೆ ಬೋಧಕ ವೃಂದ ಮುಂದಾಗಬೇಕು ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.

ಇಲ್ಲಿನ ಕೆಪಿಎಸ್ ಕಾಲೇಜಿನಲ್ಲಿ 1.2ಕೋಟಿ ರೂ. ವೆಚ್ಚದ ಹೈಟೆಕ್ ಲ್ಯಾಬ್ ನಿರ್ಮಾಣಕ್ಕೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳ ಉತ್ತಮ ಭವಿಷ್ಯಕ್ಕೆ ಶ್ರಮಿಸಬೇಕು. ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಎಲ್ಲರೂ ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಂಡು ಮಕ್ಕಳ ಶಿಕ್ಷಣಕ್ಕೆ ಪಾಲಕರು ಸಹಕರಿಸಬೇಕು. ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ವಿಶೇಷ ಆಂದೋಲನ ನಡೆಸಿ ಬಡಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.

ವಿಜ್ಞಾನ, ಕಲಾ, ವಾಣಿಜ್ಯ ವಿಭಾಗ ಪದವಿ ಪೂರ್ವ ಕಾಲೇಜಿನಲ್ಲಿದೆ. ದಾಖಲಾತಿ ಕೊರತೆ ಕಾಡದಂತೆ ಎಚ್ಚರಿಕೆ ಇರಲಿ. ಸರ್ಕಾರ ಶಿಕ್ಷಣಕ್ಕಾಗಿ ಎಲ್ಲ ರೀತಿಯ ಸವಲತ್ತು, ಸಲಕರಣೆ, ಸೌಲಭ್ಯಗಳನ್ನು ನೀಡುತ್ತಿದೆ. ಸರ್ಕಾರಿ ಶಾಲೆ ಉಳಿಸಿ, ಬೆಳಸುವುದು ತಮ್ಮ ಕರ್ತವ್ಯ ಎಂಬುದನ್ನು ಮರೆಯಬಾರದು ಎಂದು ಮನವಿ ಮಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಐಕನಹಳ್ಳಿ ಕೃಷ್ಣೇಗೌಡ, ಜೆಡಿಎಸ್ ಹೋಬಳಿ ಅಧ್ಯಕ್ಷ ಮಂಜೇಗೌಡ, ಗ್ರಾಪಂ ಅಧ್ಯಕ್ಷೆ ಭಾರತಿ ಪ್ರಕಾಶ್, ಗ್ರಾಪಂ ಸದಸ್ಯ ಎಸ್.ಕೆ.ಬಾಲಕೃಷ್ಣ, ಮುಖಂಡ ಶೇಖರ್, ಉಪನ್ಯಾಸಕರಾದ ದೊರೆಸ್ವಾಮಿ, ಕುಮಾರಸ್ವಾಮಿ, ವಿನಾಯಕ, ಎಸ್.ಎಂ.ಬಸವರಾಜು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net