ಕಾರ್ಮಿಕ ಸಮ್ಮೇಳನ ಯಶಸ್ವಿಗೊಳಿಸಿ

IMG-20200127-WA0003.jpg
Published on

ಬಳ್ಳಾರಿ: ಬೆಂಗಳೂರಿನಲ್ಲಿ ಫೆ.1 ಮತ್ತು 2ರಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಹೇಳಿದರು.

ಅಂದು ಬೆಳಗ್ಗೆ 11ಗಂಟೆಗೆ ಸಿರೂರು ಪಾರ್ಕ್ ನ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಎಐಟಿಯುಸಿ ಅಖಿಲ ಭಾರತ ಅಧ್ಯಕ್ಷ ಕಾ.ಕೆ.ರಾಧಾಕೃಷ್ಣ ಮುಖ್ಯ ಭಾಷಣಕಾರರಾಗಿ ಮಾತನಾಡಲಿದ್ದಾರೆ.

ವಿವಿಧ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, 5ಸಾವಿರಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯಿದೆ. ಬಳ್ಳಾರಿ ಜಿಲ್ಲೆಯಿಂದಲೂ ಹೆಚ್ಚಿನ ಮಟ್ಟದಲ್ಲಿ ಕಾರ್ಮಿಕರು ಭಾಗವಹಿಸಿ ಯಶಸ್ವಿಗೊಳಿಸಿ, ಸಮ್ಮೇಳನದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದೇ ವೇಳೆ ಕಾರ್ಮಿಕ ಸಮಾವೇಶ ಬಿತ್ತಿ ಪತ್ರ ಬಿಡುಗಡೆಗೊಳಿಸಿದರು.

ಎಐಟಿಯುಸಿ ಜಿಲ್ಲಾಧ್ಯಕ್ಷ ಎ.ದೇವದಾಸ್, ಜಿಲ್ಲಾ ಕಾರ್ಯದರ್ಶಿ ಪಿ.ಶರ್ಮಾಸ್ ಸೇರಿ ಮತ್ತಿತರರು ಇದ್ದರು.

ಫೋಟೋ
ಬಳ್ಳಾರಿ ನಗರದ ಪತ್ರಿಕಾ ಭವನದಲ್ಲಿ ಕಾರ್ಮಿಕ ಸಮ್ಮೇಳನದ ಭಿತ್ತಿ ಪತ್ರಗಳನ್ನು
ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಸೋಮವಾರ ಬಿಡುಗಡೆಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net