ಕನಕ ನೌಕರರ ಸಂಘದಿಂದ ಉನ್ನತ ವ್ಯಾಸಂಗಕ್ಕೆ ನೆರವು: ಸಂಘದ ಅಧ್ಯಕ್ಷ ಕೆ.ಆರ್.ಶಾಂತಕುಮಾರ್ ಭರವಸೆ

hsd kanaka sanga 26 p1
Published on

ಹೊಸದುರ್ಗ (ಚಿತ್ರದುರ್ಗ ಜಿಲ್ಲೆ): ಆರ್ಥಿಕವಾಗಿ ಹಿಂದುಳಿದ ಸಮಾಜದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಕನಕ ನೌಕರರ ಸಾಂಸ್ಕೃತಿಕ ಸಂಘದಿಂದ ನೆರವು ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಕೆ.ಆರ್.ಶಾಂತಕುಮಾರ್ ತಿಳಿಸಿದರು.

ಪಟ್ಟಣದ ಕನಕ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಸಾಕ್ಷರತೆಯಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ. ಪಾಲಕರು ಮಕ್ಕಳಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶಗಳನ್ನು ಒದಗಿಸಿಕೊಡಬೇಕು. ಸಂಘ ಸಮುದಾಯದ ಅಭಿವೃದ್ಧಿಯ ಚಿಂತನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀಧರಮೂರ್ತಿ ಮಾತನಾಡಿ, ಉನ್ನತ ಹುದ್ದೆಯಲ್ಲಿರುವ ನೌಕರರು ಸಮುದಾಯದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಕುರುಬ ಸಮಾಜದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನೌಕರರ ಸಂಘ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ. ಸಮುದಾಯ ಸಂಘಟಿಸುವ ಜವಾಬ್ದಾರಿ ಕೂಡ ಇದೆ. ಕನಕ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಸಹಕಾರ ಒದಗಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net