ಆಟೋ ಚಾಲಕರಿಗೆ ಕಾರ್ವಿುಕ ಕಾರ್ಡ್

9 Dwd 2 (Santosh Lad)
Published on

ಹುಬ್ಬಳ್ಳಿ: ಮಹಿಳೆಯರಿಗೆ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಆಟೋ ಮಾಲೀಕರು ಹಾಗೂ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಆಟೋ ಚಾಲಕರ ನೆರವಿಗೆ ಸರ್ಕಾರ ಧಾವಿಸಲಿದೆ ಎಂದು ಕಾರ್ವಿುಕ ಸಚಿವ ಸಂತೋಷ ಲಾಡ್ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಆಟೋ ಚಾಲಕರು ನಡೆಸಿದ ಮುಷ್ಕರದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಲಾಡ್ ಆಟೋ ಚಾಲಕರಿಗೆ ಕಾರ್ವಿುಕ ಕಾರ್ಡ್ ನೀಡುವ ಬಗ್ಗೆ ಶೀಘ್ರದಲ್ಲಿಯೇ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ದೆಹಲಿ ಸಭೆಗೆ ತೆರಳುವೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆ. 2ರಂದು ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಅದರಲ್ಲಿ ನಾನು ಭಾಗವಹಿಸುತ್ತೇನೆ ಎಂದು ಲಾಡ್ ಹೇಳಿದರು. ಪಕ್ಷ ಸಂಘಟನೆ, ನೀತಿ-ನಿರೂಪಣೆ, ಲೋಕಸಭಾ ಚುನಾವಣೆ ಬಗ್ಗೆ ರ್ಚಚಿಸಲು ಸಭೆ ಕರೆಯಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ ಯಾವುದೇ ಪತ್ರ ಹರಿದು ಹಾಕಿಲ್ಲ. ನಾನೂ ಸಭೆಯಲ್ಲಿ ಇದ್ದೆ. ಅಸಮಾಧಾನಗೊಂಡ ಶಾಸಕರ ಪತ್ರ ಹರಿದಿದ್ದು ನಾನು ನೋಡಿಲ್ಲ. ಇದರ ಬಗ್ಗೆ ನನ್ನ ಬಳಿ ಹೆಚ್ಚಿನ ಮಾಹಿತಿ ಇಲ್ಲ ಎಂದರು. ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸ್ವೀಕರಿಸಲಾಗುತ್ತಿದೆ. ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಣ ನೀಡಲಾಗುವುದು.

ನಮ್ಮ ಸರ್ಕಾರ ಹಿಂದುಳಿದವರು, ಬಡವರ ಪರವಿದೆ. ಅಸಂಘಟಿತ ಕಾರ್ವಿುಕರಿಗೆ ಸರ್ಕಾರದಿಂದ ಸವಲತ್ತು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net