ನಿರುದ್ಯೋಗ ಪದವೀಧರರಿಗೆ ಉದ್ಯೋಗ

13-RNR-06
Published on

ಹಾವೇರಿ: ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ರಾಜ್ಯದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣವೇ ತುಂಬಲು ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ನಿರುದ್ಯೋಗ ಪದವೀಧರರಿಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪ ಭರವಸೆ ನೀಡಿದರು.

ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶ್ಚಿಮ ಪದವೀಧರ ಮತಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಈಗಾಗಲೇ ಮೂರ್ನಾಲ್ಕು ಬಾರಿ ಮತದಾರರ ಸಭೆ ಮಾಡಲಾಗಿದ್ದು, ಪದವೀಧರರ ಒಲವು ನನ್ನ ಕಡೆಯಿದೆ. ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಅ. 30ರವರೆಗೆ ಶಾಲೆಗಳ ಶಿಕ್ಷಕರಿಗೆ ರಜೆ ಘೊಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಇದು ಕಾಲೇಜುಗಳ ಉಪನ್ಯಾಸಕರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ. ಮೈದೂರ, ಸಂಜೀವ ಕುಮಾರ ನೀರಲಗಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net