ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ಪತ್ರ

Maski letter
ಮಸ್ಕಿಯ ದೇವನಾಂಪ್ರಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಡಾ.ಮಹಾಂತಗೌಡ ಪಾಟೀಲ್ ಉದ್ಯೋಗ ಪತ್ರ ವಿತರಿಸಿದರು. ಉಪನ್ಯಾಸಕರಾದ ರೋಹಿಣಿಮೂರ್ತಿ, ಶ್ರೀನಿವಾಸ ಯಾಳಗಿ, ಪ್ರಭುದೇವ ಸಾಲಿಮಠ ಇತರರಿದ್ದರು.
Published on

ಮಸ್ಕಿ: ಇತ್ತೀಚೆಗೆ ಖಾಸಗಿ ಕಾಲೇಜುಗಳ ವ್ಯಾಮೋಹ ಹೆಚ್ಚುತಿದೆ. ಅಲ್ಲಿ ಕಲಿತರೆ ಮಾತ್ರ ಉದ್ಯೋಗ ಎನ್ನುವವರಿಗೆ ಸರ್ಕಾರಿ ಕಾಲೇಜಿನಲ್ಲಿ ಓದಿ ಉದ್ಯೋಗ ಪಡೆದ ನಮ್ಮ ವಿದ್ಯಾರ್ಥಿಗಳು ಮಾದರಿಯಾಗಿದ್ದಾರೆ ಎಂದು ದೇವನಾಂಪ್ರಿಯ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಹಾಂತಗೌಡ ಪಾಟೀಲ್ ಹೇಳಿದರು.

ಪಟ್ಟಣದ ದೇವನಾಂಪ್ರಿಯ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ಪತ್ರ ವಿತರಿಸಿ ಮಾತನಾಡಿದರು. ಇತ್ತೀಚೆಗೆ ಬೆಂಗಳೂರಿನ ಕ್ರಿಯೇಟಿವ್ ಜಾಬ್ ಡ್ರೈವ್ ಕಂಪನಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ 34 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪದವಿ ಮುಗಿಯುತ್ತಲೇ ಉದ್ಯೋಗ ಪಡೆಯಲಿದ್ದಾರೆ ಎಂದರು.

ಉಪನ್ಯಾಸಕರಾದ ರೋಹಿಣಿಮೂರ್ತಿ, ಶ್ರೀನಿವಾಸ ಯಾಳಗಿ, ಪ್ರಭುದೇವ ಸಾಲಿಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net