

ಕಾರ್ಕಳ: ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆ ನೀಡುವುದು ಸಾವಾನ್ಯ. ನೀಡಿದ ಪ್ರಣಾಳಿಕೆಯನ್ನು ಕಾರ್ಯಗತಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅದೆಷ್ಟೋ ಮಹಿಳೆಯರನ್ನು ಸಬಲೆಯರನ್ನಾಗಿ ವಾಡುವ ಕಾರ್ಯ ವಾಡಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಇಂದು ಅದೆಷ್ಟೋ ಕುಟುಂಬಗಳಿಗೆ ನೆರವಾಗಿದೆ ಎಂದು ಗ್ಯಾರಂಟಿ ಸಮಿತಿ ಜಿಲ್ಲಾ ಅಧ್ಯಕ್ಷ ಅಶೋಕ್ಕುವಾರ್ ಕೊಡವುರು ಹೇಳಿದರು.
ಕಾರ್ಕಳ ತಾಲೂಕು ಪಂಚಾಯಿತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಇನ್ನಾ ಗ್ರಾಮ ಪಂಚಾಯಿತಿ ವತಿಯಿಂದ ಇನ್ನಾ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖಂಡ ಮುನಿಯಾಲು ಉದಯಕುವಾರ್ ಶೆಟ್ಟಿ ವಾತನಾಡಿ, ಸರ್ಕಾರ ಜನಪರ ಯೋಜನೆಯನ್ನು ನೀಡುವ ಮೂಲಕ ಅದೆಷ್ಟೋ ಯುವಕರಿಗೆ ಹಾಗೂ ಮಹಿಳೆಯರಿಗೆ ಪ್ರಯೋಜನಕಾರಿಯಾದ ಯೋಜನೆಯನ್ನು ರೂಪಿಸಿದೆ ಎಂದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ವಾತನಾಡಿದರು. ಇನ್ನಾ ಗ್ರಾಪಂ ಅಧ್ಯಕ್ಷೆ ಸರಿತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿವಾಕರ್ ಆರ್.ಶೆಟ್ಟಿ, ತಾಲೂಕು ಕಾರ್ಯನಿರ್ಹಣಾಧಿಕಾರಿ ಪ್ರಶಾಂತ್, ಗ್ಯಾರಂಟಿ ಸಮಿತಿ ಜಿಲ್ಲಾ ಸದಸ್ಯ ದೀಪಕ್ ಕೋಟ್ಯಾನ್ ಇನ್ನಾ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆಯರು ಪ್ರಾರ್ಥಿಸಿದರು. ಗ್ರಾಮ ಪಂಚಾಯಿತಿ ವಾಜಿ ಅಧ್ಯಕ್ಷ ಕುಶಾ ಆರ್.ಮೂಲ್ಯ ಸ್ವಾಗತಿಸಿದರು. ಪಿಡಿಒ ಸದಾಶಿವ ನಿರೂಪಿಸಿದರು.