ಸಬಲೀಕರಣಕ್ಕೆ ಬೇಕು ಹೆಚ್ಚು ಅನುದಾನ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಕೈಗೊಂಡಿದ್ದ ಸಭೆಯಲ್ಲಿ ರಾಜ್ಯ ಮಹಿಳಾ ಅಭಿವದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ, ರಾಜ್ಯ ಮಹಿಳಾ ಅಭಿವದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕ ಮಹಾದೇವಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮತ್ತಿತರರು ಇದ್ದರು.
5CBP2
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಕೈಗೊಂಡಿದ್ದ ಸಭೆಯಲ್ಲಿ ರಾಜ್ಯ ಮಹಿಳಾ ಅಭಿವದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ, ರಾಜ್ಯ ಮಹಿಳಾ ಅಭಿವದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕ ಮಹಾದೇವಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮತ್ತಿತರರು ಇದ್ದರು.
Published on

ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ ಆಶಯ- ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ
ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ನಿಗಮಕ್ಕೆ ಕಡಿಮೆ ಅನುದಾನ ಸಿಕ್ಕಿದೆ ಎಂದು ರಾಜ್ಯ ಮಹಿಳಾ ಅಭಿವದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಹಿಂದೆ ಸರ್ಕಾರದಿಂದ ನಿಗಮಕ್ಕೆ 300ರಿಂದ 400 ಕೋಟಿ ರೂ. ಅನುದಾನ ಸಿಗುತ್ತಿತ್ತು. ಈ ವರ್ಷ 95 ಕೋಟಿ ರೂ. ವಾತ್ರ ಬಿಡುಗಡೆಯಾಗಿದೆ. ಮಹಿಳಾ ಸಬಲೀಕರಣದ ದಷ್ಟಿಯಿಂದ ಹೆಚ್ಚು ಅನುದಾನ ಒದಗಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ ಎಂದರು.
ರಾಜ್ಯದಲ್ಲಿನ ಅಸಹಾಯಕರು, ಶೋಷಿತ ಮಹಿಳೆಯರು, ವಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಸಾಲ ಸೇರಿ ಹಲವು ಯೋಜನೆಗಳ ಮೂಲಕ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿಗಮವು ಮಹಿಳೆಯರ ಸಬಲೀಕರಣದ ಜತೆಗೆ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಹಾಗಾಗಿ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದರು.
ಈ ವರ್ಷ ಲಭಿಸಿರುವ 95 ಕೋಟಿ ರೂ.ಗಳಲ್ಲಿ ಕೆಸ್‌ಎ್ಸಿಗೆ 55 ಕೋಟಿ ರೂ., ಸಿಬ್ಬಂದಿ ವೇತನಕ್ಕೆ 5 ಕೋಟಿ ರೂ. ವೆಚ್ಚವಾಗುತ್ತದೆ. ಉಳಿದ 35 ಕೋಟಿ ರೂಪಾಯಿಗಳಲ್ಲಿ ನಿಗಮದ ಅವಶ್ಯಕತೆಗಳಿಗೆ ತಕ್ಕಂತೆ ಯೋಜನೆ ಮತ್ತು ಕಾರ್ಯಕ್ರಮ ರೂಪಿಸಲು ಸಾಧ್ಯವಾಗುತ್ತಿಲ್ಲ ಎಂದರು.ದೇವದಾಸಿ ಮಾಸಿಕ ನೆರವು ಹೆಚ್ಚಳ
ವಾಜಿ ದೇವದಾಸಿಯರಿಗೆ ಪ್ರತಿ ತಿಂಗಳು ಸಿಗುತ್ತಿದ್ದ 1,500 ರೂ.ಗಳನ್ನು 2 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರನ್ನು ಭಿಕ್ಷಾಟನೆಯಿಂದ ಹೊರತಂದು ಸ್ವಾವಲಂಬಿಗಳನ್ನಾಗಿಸಲು ಗಹಲಕ್ಷ್ಮಿ, ಅನ್ನಭಾಗ್ಯ, ಗಹಜ್ಯೋತಿ ಮತ್ತು ಶಕ್ತಿ ಸೇರಿ ಗ್ಯಾರಂಟಿ ಯೋಜನೆಗಳ ಮೂಲಕ ಸವಲತ್ತುಗಳನ್ನು ಒದಗಿಸಲಾಗುತ್ತಿದೆ ಎಂದು ಪದ್ಮಾವತಿ ತಿಳಿಸಿದರು.


ಗುರುತಿನಚೀಟಿ ವಿತರಣೆ
ಮಹಿಳಾ ಅಭಿವದ್ಧಿ ನಿಗಮದಿಂದ ಸೌಲಭ್ಯ ಪಡೆದ ವಿವಿಧ ಯೋಜನೆಯ ಅರ್ಹ ಫಲಾನುಭವಿಗಳಿಗೆ ಗುರುತಿನಚೀಟಿ ವಿತರಿಸಿದ ಅಧ್ಯಕ್ಷೆ ಜಿ. ಪದ್ಮಾವತಿ, ಜಿಲ್ಲೆಯಲ್ಲಿ ನಿಗಮದಿಂದ ಸಿಗುತ್ತಿರುವ ಸವಲತ್ತುಗಳು, ಸಮಸ್ಯೆಗಳು ಮತ್ತು ಸ್ಪಂದನೆಯ ಬಗ್ಗೆ ಮಾಹಿತಿ ಪಡೆದರು. ಲಾನುಭವಿಗಳಿಗೆ ಸಕಾಲಕ್ಕೆ ಸ್ಪಂದಿಸಿ, ಅಗತ್ಯ ನೆರವು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.


ಸೌಲಭ್ಯ ಬಳಸಿಕೊಳ್ಳಲು ಮನವಿ
ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಕಳೆದ 40 ದಿನಗಳಲ್ಲಿ 8 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವಾಜಿ ದೇವದಾಸಿಯರ ಸಮಸ್ಯೆಗಳನ್ನು ಅರಿಯಲು ಪ್ರಾವಾಣಿಕವಾಗಿ ಪ್ರಯತ್ನಿಸಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರು, ಎಚ್‌ಐವಿ ಸೋಂಕಿತರು ಹಾಗೂ ದಮನಿತ ಮಹಿಳೆಯರಿಗೆ ನಿಗಮದಿಂದ ವಿವಿಧ ಆರ್ಥಿಕ ಚಟುವಟಿಕೆ ಕೈಗೊಳ್ಳಲು 30 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದನ್ನು ಬಳಸಿಕೊಳ್ಳಬೇಕು ಎಂದು ಪದ್ಮಾವತಿ ತಿಳಿಸಿದರು.


ಜಿಲ್ಲೆಯಲ್ಲಿ ನಿಗಮದ ಸೌಲಭ್ಯ
ಜಿಲ್ಲೆಯಲ್ಲಿ 2,407 ಲಿಂಗತ್ವ ಅಲ್ಪ ಸಂಖ್ಯಾತರಿದ್ದು ಈ ಪೈಕಿ 13 ಜನರಿಗೆ ಉಚಿತ ನಿವೇಶನ ಮತ್ತು 34 ಜನರಿಗೆ ಗಹಲಕ್ಷ್ಮಿ ಯೋಜನೆ ತಲುಪುತ್ತಿದೆ. ಮುಂದಿನ ದಿನಗಳಲ್ಲಿ 3 ಸಾವಿರ ನಿವೇಶನಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಧನಶ್ರೀ ಯೋಜನೆಯಡಿ 9 ಅರ್ಜಿಗಳು ಸ್ವೀಕತಗೊಂಡಿದ್ದು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಹಾಗೂ ವಿಕಲ ಚೇತನ ಯೋಜನೆಯಡಿ ಅರ್ಹ 16 ಫಲಾನುಭವಿಗಳಿಗೆ ಸವಲತ್ತು ನೀಡಲಾಗಿದೆ. ಉದ್ಯೋಗಿನಿ ಯೋಜನೆಯಡಿ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು 13 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ನಿಗಮ ಮಾಹಿತಿ ನೀಡಿದೆ.
ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು, ಎಚ್.ಐ.ವಿ ಸೋಂಕಿತ ಹಾಗೂ ಬಾಧಿತ ಮಹಿಳೆಯರ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕಿನಿಂದ ಸಾಲ ಸೌಲಭ್ಯವನ್ನು ನಿಗಮವು ಕೊಡಿಸುತ್ತಿದೆ. ಇದಕ್ಕೆ ಶೇ 50 ರಷ್ಟು ಸಹಾಯಧನ ಸಿಗುತ್ತದೆ. ಆಸೀಡ್ ದಾಳಿಗೆ ಮಹಿಳೆ ತುತ್ತಾಗಿದಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 1 ಪ್ರಕರಣ ವರದಿಯಾಗಿದ್ದು ನಿಗಮದಿಂದ 5 ಲಕ್ಷ ರೂ ಸಹಾಯಧನ ಸೌಲಭ್ಯ ನೀಡಲಾಗಿದೆ ಎಂದು ತಿಳಿಸಿದೆ.

ಮಹಿಳಾ ಅಭಿವದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಮಹಿಳಾ ಮಕ್ಕಳ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net