ಕಾರ್ಮಿಕರ ಪರ ಕಾನೂನು ರೂಪಿಸಿ

FotoJet
Published on

ನಂದಗುಡಿ: ಕಾರ್ಮಿಕರ ಪರವಾದ ಕಾನೂನು ಜಾರಿಯಾಗಬೇಕು. ಕೇಂದ್ರದ ನಾಲ್ಕು ಸಂಹಿತೆಗಳನ್ನಾಗಿ ಮಾಡಿರುವ 29 ಕಾನೂನುಗಳು, ಶಾಸನಗಳ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ಹೇಳಿದರು.

ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಸಿಐಟಿಯುನ ಜಿಲ್ಲಾ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಮಿಕರ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

ಡಿಜಿಟಲ್ ಮೀಟರ್ ಅಳವಡಿಸುವುದು ಹಾಗೂ ಖಾಸಗೀಕರಣದ ಅವಕಾಶಗಳನ್ನು ಒಳಗೊಂಡ ವಿದ್ಯುತ್ ತಿದ್ದುಪಡಿ ಮಸೂದೆ 2022 ನ್ನು ರಾಜ್ಯದಲ್ಲಿ ಜಾರಿಗೊಳಿಸಬಾರದು, ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ./ಯು.ಕೆ.ಜಿ. ಪ್ರಾರಂಭಿಸಬೇಕು ಹಾಗೂ ಕಾರ್ಮಿಕರಿಗೆ ವೇತನ ಪರಿಷ್ಕರಣೆಯಾಗಬೇಕು. ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು. ನಿವೃತ್ತಿ ವೇತನ ಸೌಲಭ್ಯವಿಲ್ಲದೆ ಯಾರನ್ನೂ ಕೆಲಸದಿಂದ ತೆಗೆಯಬಾರದು. ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಅಸಂಘಟಿತ ಕಾರ್ಮಿಕರ ಕಲ್ಯಾಣ ತ್ರಿಪಕ್ಷಿಯ ಮಂಡಳಿ ಸಮಿತಿಗಳಲ್ಲಿ ಸಿ.ಐ.ಟಿ.ಯು. ಪ್ರತಿನಿಧಿಗಳನ್ನು ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಇಲಾಖೆ ರೂಪಿಸಿರುವ ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಮತ್ತು ಭವಿಷ್ಯ ನಿಧಿ ಯೋಜನೆ ಜಾರಿಗಾಗಿ ಕನಿಷ್ಠ 500 ಕೋಟಿ ರೂಪಾಯಿ ಬಜೆಟ್‌ನಲ್ಲಿ ೋಷಿಸಬೇಕು. ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಬರಬೇಕಾದ ಜಿ.ಎಸ್.ಟಿ. ಪಾಲನ್ನು ಪಡೆಯಲು ಕೂಡಲು ಕ್ರಮವಹಿಸಬೇಕು.

ಡಾ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಪ್ರಕಾರ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ, ಸಾರ್ವಜನಿಕ ಖರೀದಿ ವ್ಯವಸ್ಥೆಯನ್ನು ಬಲಪಡಿಸುವುದು. ಜನವಿರೋಧಿ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ 2019 ಹಾಗೂ ಮೇಜರ್ ಫೋರ್ಟ್ ಅಥಾರಿಟಿಸ್ ಕಾಯಿದೆ 2021 ಗಳನ್ನು ಕೈ ಬಿಡಲು ರಾಜ್ಯ ಸರ್ಕಾರ ಒತ್ತಾಯಿಸಬೇಕು. ಕೃಷಿ ಯೋಗ್ಯ ಭೂಮಿಯನ್ನು ಬಲವಂತದ ಭೂಸ್ವಾಧೀನದಿಂದ ಕೈಬಿಡಬೇಕು. ಸಾರಿಗೆ ಚಾಲಕರ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಲು ಬಜೆಟ್‌ನಲ್ಲಿ 500 ಕೋಟಿ ಅನುದಾನ ನೀಡಬೇಕೆಂದು ಆಗ್ರಹಿಸಿದರು.

ಮಾಚ್3ರಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಅಹೋರಾತ್ರಿ ಅನಿರ್ದಿಷ್ಠಾವಧಿ ಧರಣಿ ಹಮ್ಮಿಕೊಂಡಿದ್ದು, ಎಲ್ಲ ಕಾರ್ಮಿಕರು ಭಾಗವಹಿಸಬೇಕಿದೆ ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net