ಪಠ್ಯತೇರ ಚಟುವಟಿಕೆಗೂ ಪ್ರೋತ್ಸಾಹಿಸಿ

26bhr 4
ಬಾಳೆಹೊನ್ನೂರಿನಲ್ಲಿ ಆಯೋಜಿಸಿದ್ದ ವಲಯಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. ಸೋಮೇಶ್‌ಗೌಡ, ಶೀಲಾವತಿ, ಪ್ರೆಸ್ಸಿ, ಶುಭ, ಸ್ಟೀನ್ ಇದ್ದರು.
Published on

ಬಾಳೆಹೊನ್ನೂರು: ವಿದ್ಯಾರ್ಥಿಗಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಕಾರಗಳನ್ನು ವೇದಿಕೆಯಲ್ಲಿ ಹೊರಹೊಮ್ಮಿಸಿ ಸಾಂಸ್ಕೃತಿಕವಾಗಿ ಮುಂದುವರಿಯಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಸಮೀಪದ ಕಡಬಗೆರೆಯ ಜ್ಯೋತಿರ್ ವಿಕಾಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ವಲಯಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಸರ್ಕಾರ ಪ್ರತಿಭಾ ಕಾರಂಜಿ, ಕ್ರೀಡಾಕೂಟ, ಮಕ್ಕಳ ಮೇಳ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸಿದ್ದು, ಇವುಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಹೊರಹೊಮ್ಮಿಸಿ ವೇದಿಕೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಪಾಲಕರು ಮಕ್ಕಳಿಗೆ ಕೇವಲ ಪಠ್ಯ ಚಟುವಟಿಕೆಗಳಲ್ಲಿ ಸಾಧನೆ ಮಾಡಲಿ ಎಂಬ ಮನೋಭಾವನೆ ಬಿಟ್ಟು ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಲು ಪ್ರೋತ್ಸಾಹಿಸುವ ಮೂಲಕ ವಿದ್ಯಾರ್ಥಿಗಳನ್ನು ಬೆಳೆಸಬೇಕು ಎಂದರು.
ಶಿಕ್ಷಕ, ಪೋಷಕ ಸಮಿತಿ ಅಧ್ಯಕ್ಷ ಸೋಮೇಶ್‌ಗೌಡ, ದೇವದಾನ ಗ್ರಾಪಂ ಅಧ್ಯಕ್ಷೆ ಶೀಲಾವತಿ, ಎಜುಕೇಷನ್ ಕೌನ್ಸಿಲರ್ ಪ್ರೆಸ್ಸಿ, ಮುಖ್ಯಶಿಕ್ಷಕಿ ಶುಭ, ಹಿರಿಯ ಕ್ರೀಡಾಪಟು ಓ.ಡಿ.ಸ್ಟೀನ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net