ಸ್ವದೇಶಿ ವಸ್ತುಗಳನ್ನು ಬಳಸಿ ಪ್ರೋತ್ಸಾಹಿಸಿ

25KDR3
Published on

ಕಡೂರು: ಸ್ವದೇಶಿ ವಸ್ತುಗಳ ಬಳಕೆಯಿಂದ ಕುಟುಂಬದ ಆರ್ಥಿಕತೆ ಬಲಪಡಿಸಲು ಸಹಕಾರಿಯಾಗುತ್ತದೆ ಎಂದು ಶಿವಮೊಗ್ಗದ ಯೋಗ ವಿಸ್ಮಯ ಟ್ರಸ್ಟ್‌ನ ಅನಂತ್ ಗುರೂಜೀ ತಿಳಿಸಿದರು.
ಅರಿವಿನ ಮನೆ ಸಂಘದ ಕಚೇರಿಯಲ್ಲಿ ಸ್ವದೇಶಿ ವಸ್ತುಗಳ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟದಿಂದ ಗುಡಿ ಕೈಗಾರಿಕೆರೆಗೆ ಉತ್ತೇಜನ ದೊರಕುತ್ತದೆ. ಲಕ್ಷಾಂತರ ಜನರಿಗೆ ಉದ್ಯೋಗ ದೊರಕಿ ಆರ್ಥಿಕವಾಗಿ ಬಲಗೊಳ್ಳುತ್ತಾರೆ. ಅಲ್ಲದೇ ದೇಶಿ ವಸ್ತುಗಳಿಗೆ ಬೇಡಿಕೆ ಹೆಚ್ಚುವುದರಿಂದ ದೇಶ ಆರ್ಥಿಕವಾಗಿ ಮುನ್ನೆಡೆಯಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬರು ಸ್ವದೇಶಿ ವಸ್ತುಗಳನ್ನು ಬಳಸಿ ಪ್ರೋತ್ಸಾಹಿಸಬೇಕು ಎಂದರು.
ಅರಿವಿನ ಮನೆ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಡಾ.ಸಿ.ಜೆ. ಶಶಿಧರ್ ಮಾತನಾಡಿ, ಉತ್ತಮ ಗುಣಮಟ್ಟದ ಸ್ವದೇಶಿ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಉತ್ತಮ ಆರೋಗ್ಯ ಮತ್ತು ಆರ್ಥಿಕವಾಗಿ ಬೆಳೆಯಲು ಸಾಧ್ಯ. ಉತ್ತಮ ಆರೋಗ್ಯಕ್ಕಾಗಿ ಶುದ್ಧ ಜೇನುತುಪ್ಪ, ಗಾಣದ ಅಡುಗೆಎಣ್ಣೆ, ಮಧುಮೇಹಿ ರವೆ, ಅಕ್ಕಿ, ಸಾವಯವ ಅಕ್ಕಿ ನೀಡಲಾಗುತ್ತಿದೆ ಎಂದರು.
ಪ್ರಭೋಧಿನಿ ಗುರುಕುಲದ ಅಧ್ಯಕ್ಷ ಭೀಮಪ್ಪ, ಕಡೂರು ನಿವೃತ್ತ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮಲ್ಲಪ್ಪ, ಬೀರೂರು ವಾಸವಿ ವಿದ್ಯಾಪೀಠದ ಅಧ್ಯಕ್ಷ ಗೋಪಾಲಕೃಷ್ಣ, ನರಸಿಂಹಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net