ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ

Published on

ಬಳ್ಳಾರಿ : ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹಾಕಲು ವಾರ್ಷಿಕ ಶಿಬಿರ ಉತ್ತಮ ಅವಕಾಶ ಎಂದು ಎಸ್‌ಎಸ್‌ಎ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಸೋಮನಾಥ ಹೇಳಿದರು.

ತಾಲೂಕಿನ ಕಪ್ಪಗಲ್ ಗ್ರಾಮದಲ್ಲಿ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಆಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಎಬಿಸಿಡಿ ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಅಲ್ಲದೆ, ಸಮುದಾಯದ ಜತೆಗೆ ಸಹಭಾಗಿತ್ವ ಮನೋಭಾವನೆ ವಿದ್ಯಾರ್ಥಿ ಜೀವನದಿಂದಲೇ ಬೆಳಿಸಿಕೊಂಡಾಗ ಉತ್ತಮ ನಾಗರಿಕರಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net