ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ಸ್ತುತ್ಯರ್ಹ

Ull_Thingala-belaku
Published on

ಮೂಲ್ಕಿ: ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆಯಿಂದ ಸಮಾಜ ಸೇವೆ ಸಹಿತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ಅಭಿನಂದನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಹೇಳಿದರು.

ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಮಂಗಳವಾರ ನಡೆದ ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದಡಿ ಸಾಧಕರಿಗೆ ಗೌರವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಬೈ ಪತ್ರಕರ್ತ ಉಮೇಶ್ ಅಂಚನ್ ಮಾತನಾಡಿ, ಗ್ರಾಮೀಣ ವಲಯದಲ್ಲಿ ಸ್ವಾರ್ಥರಹಿತವಾಗಿ ಸಮಾಜ ಸೇವೆ ಮಾಡುವ ವ್ಯಕ್ತಿಗಳನ್ನು ಗುರುತಿಸುವ ಕಾರ್ಯ ಅಭಿನಂದನೀಯವಾಗಿದ್ದು, ಈ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಸಮಾಜಸೇವಕ ಹಬೀಬುಲ್ಲ ದಂಪತಿಯನ್ನು ಗೌರವಿಸಲಾಯಿತು. ಅಮೆರಿಕಾ ಪ್ರವಾಸಗೈಯಲಿರುವ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು.

ವಿಜಯ ಕಾಲೇಜು ನಿವೃತ್ತ ಪ್ರಾಂಶುಪಾಲ ಪ್ರೊ.ಸ್ಯಾಮ್ ಮಾಬೆನ್ ಅಭಿನಂದನಾ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಮುಂಬೈ ಕರ್ನಾಟಕ ಮಲ್ಲಪತ್ರಿಕೆಯ ಉಮೇಶ್ ಅಂಚನ್, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹರ ಕೋಟ್ಯಾನ್, ವಿಜಯ ಕುಮಾರ್ ಕುಬೆವೂರು, ಉದ್ಯಮಿ ಜೋನ್ ಕ್ವಾಡ್ರಾಸ್, ಸಂಘಟಕ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ವಾಮನ್ ಕೋಟ್ಯಾನ್ ನಡಿಕುದ್ರು, ಬಂಕಿನಾಯಕರು, ರಮೇಶ್ ಅಮೀನ್ ಕೊಕ್ಕರಕಲ್, ರವಿಚಂದ್ರ ರಾವ್, ಎನ್. ರವಿ ಅಂಚನ್, ಸೇಸಪ್ಪ ದೇವಾಡಿಗ ಮತ್ತಿತರರಿದ್ದರು.
ಹರಿಶ್ಚಂದ್ರ ಸಾಲ್ಯಾನ್ ಸ್ವಾಗತಿಸಿ, ದಿನೇಶ್ ಶೆಟ್ಟಿ ವಂದಿಸಿದರು. ರವಿಚಂದ್ರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net