

ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಗಜಪಯಣ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತದೆ ಎಂದರು.
ಆನೆ ದಾಳಿಗೆ ಶಾರ್ಪ್ ಶೂಟರ್ ಸಾವು ಸಂಬಂಧ ಪ್ರಕರಣದ ತನಿಖೆಗೆ ಆದೇಶ ನೀಡಿದ್ದೇನೆ. ಬಹಳ ದೊಡ್ಡ ದುರಂತ ಆಗಿದೆ. ಅರಣ್ಯ ಇಲಾಖೆಗೆ ದೊಡ್ಡ ಹಾನಿಯಾಗಿದೆ. ಸರ್ಕಾರದ ವತಿಯಿಂದ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ಸರ್ಕಾರ ಕುಟುಂಬಸ್ಥರ ಪರವಾಗಿ ನಿಲ್ಲುತ್ತದೆ ಎಂದರು.