ನವನಗರದಲ್ಲಿ ಅಂಗಡಿ ತೆರವು

Published on

ಹುಬ್ಬಳ್ಳಿ: ಇಲ್ಲಿಯ ನವನಗರ 5ನೇ ಕ್ರಾಸ್ ಬಳಿ ರಸ್ತೆ ಅತಿಕ್ರಮಿಸಿ ಇಡಲಾಗಿದ್ದ ಅಂಗಡಿಯೊಂದನ್ನು ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ತೆರವುಗೊಳಿಸಲಾಗಿದೆ.

ಪಾಲಿಕೆ ವಲಯ ಕಚೇರಿ ನಂ. 4ರ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು. ‘ರಸ್ತೆ ಅತಿಕ್ರಮಿಸಿ ಅಂಗಡಿ ಇಡಲಾಗಿತ್ತು. 2 ಬಾರಿ ನೋಟಿಸ್ ನೀಡಿದರೂ ತೆರವುಗೊಳಿಸಿರಲಿಲ್ಲ. ಅಂಗಡಿಗೆ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೆಲ್ಡಿಂಗ್ ಸ್ಟ್ರಕ್ಚರ್ ಮುರಿದು ತೆರವುಗೊಳಿಸಲಾಗಿದೆ’ ಎಂದು ಪಾಲಿಕೆ ವಲಯ ಕಚೇರಿ ಸಹಾಯಕ ಆಯುಕ್ತ ಪ್ರಹ್ಲಾದ ರೆಡ್ಡಿ ತಿಳಿಸಿದ್ದಾರೆ.

ಇದಲ್ಲದೇ ರಸ್ತೆ ಬದಿ ವ್ಯಾಪಾರ ನಡೆಸದಂತೆ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇಂದು ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ 5-6 ಜನ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದರು. ಹಬ್ಬದ ಹಿನ್ನೆಲೆಯಲ್ಲಿ ಇಂದು ವ್ಯಾಪಾರ ನಡೆಸಿ, ಮುಂದಿನ ದಿನಗಳಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net