ಲಕ್ಷ್ಮೇಶ್ವರದಲ್ಲಿ ಅತಿಕ್ರಮಣ ತೆರವು

LAXMESHWAR
ಲಕ್ಷ್ಮೇಶ್ವರದ ದೂದನಾನಾ ದರ್ಗಾಕ್ಕೆ ಹೊಂದಿಕೊಂಡಿರುವ ರಸ್ತೆ ಅತಿಕ್ರಮಣವನ್ನು ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ನೇತೃತ್ವದಲ್ಲಿ ಮಂಗಳವಾರ ತೆರವುಗೊಳಿಸಲಾಯಿತು. ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕ ಜಿ.ಎಂ.ಮಹಾಂತಶೆಟ್ಟರ ಇದ್ದರು.
Published on

ಲಕ್ಷ್ಮೇಶ್ವರ: ಪಟ್ಟಣದ ದೂದನಾನಾ ದರ್ಗಾಕ್ಕೆ ಹೊಂದಿಕೊಂಡಿರುವ ಹಾಗೂ ಚರಂಡಿ ಮೇಲೆ ಮತ್ತು ಚರಂಡಿ ಮುಂದಿನ ರಸ್ತೆಗೆ ಹೊಂದಿಕೊಂಡು ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಮಂಗಳವಾರ ತೆರವುಗೊಳಿಸಲಾಯಿತು.

ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ‘ದೂದನಾನಾ ದರ್ಗಾ ಭಾವೈಕ್ಯತೆಯ ಕೇಂದ್ರವಾಗಿದ್ದು ಇಲ್ಲಿ ದೇಶದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಾರೆ. ಇದರ ಸುತ್ತಮುತ್ತಲಿನ ವಾತಾವರಣ ಸುಂದರವಾಗಿರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಲ್ಲಿ ಒತ್ತುವರಿ ಮಾಡಿಕೊಂಡು ಜನರಿಗೆ ತೊಂದರೆ ಮಾಡುವದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದರು.

ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಮಾತನಾಡಿ, ಸಾವಿರಾರು ಜನರು ಬರುವ ಈ ಪವಿತ್ರ ಸ್ಥಳದ ಸುತ್ತಲೂ ಗಲೀಜು ತುಂಬಿಕೊಂಡಿದ್ದರೆ ಚೆನ್ನಾಗಿರುವುದಿಲ್ಲ. ಇಲ್ಲಿ ಎಲ್ಲರೂ ಒಂದಾಗಿ ಹೋಗಬೇಕು, ಅತಿಕ್ರಮಣ ಮಾಡಿದ ಅಂಗಡಿಗಳನ್ನು ಮುಲಾಜಿಲ್ಲದೆ ತೆಗೆದು ಹಾಕಿ, ಎರಡು ಸಮಾಜ ಬಾಂಧವರು ಒಗ್ಗಟ್ಟಿನಿಂದ ಸಾಗುವ ಮೂಲಕ ಸಣ್ಣ ಪುಟ್ಟ ಗೊಂದಲಗಳನ್ನು ನಿವಾರಿಸಿಕೊಳ್ಳಬೇಕು ಎಂದರು.

ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ನೇತೃತ್ವದಲ್ಲಿ ತೆರವು ಕಾರ್ಯ ಆರಂಭಿಸಲಾಯಿತು. ಅಂಗಡಿಕಾರರು ಕೂಡ ಸ್ವಯಂಪ್ರೇರಿತರಾಗಿ ತಮ್ಮ ಸಾಮಗ್ರಿಗಳನ್ನು ತೆರವುಗಳೊಳಿಸಿ ಸಹಕರಿಸಿದರು. ಆರೋಗ್ಯ ನೀರಿಕ್ಷಕ ಮಂಜುನಾಥ ಮುದಗಲ್, ಪುರಸಭೆ ಸಿಬ್ಬಂದಿ, ಪಿಎಸ್‌ಐಗಳಾದ ಈರಪ್ಪ ರಿತ್ತಿ, ವಿ.ಜಿ.ಪವಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net