ಬಿಡದಿಯಲ್ಲಿ ಒತ್ತುವರಿ ತೆರವು ಆರಂಭ

d572811a-792e-4d1d-83a9-5efa14d82093-1.jpg
Published on

ಬಿಡದಿ: ಕೇಂದ್ರ ಸಚಿವ ಎಚ್‌‌.ಡಿ.ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಹಿನ್ನೆಲೆಯಲ್ಲಿ ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ನಿಂದ ಖಡಕ್ ಸೂಚನೆ ಹಿನ್ನೆಲೆಯಲ್ಲಿ ತೆರವಿಗೆ ಜಿಲ್ಲಾಡಳಿತ ಮುಂದಾಗಿದೆ.


ಬಿಡದಿಯ ಕೇತಗಾನಹಳ್ಳಿಯ ಸರ್ವೇ 7,8,9,10,16,17 ಮತ್ತು 79ರಲ್ಲಿ ಒತ್ತುವರಿ ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರೋ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಈ ಬಗ್ಗೆ ಕಂದಾಯ ಇಲಾಖೆ ಹಾಗೂ ಸರ್ವೇ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ವೇ ವರದಿಯನ್ನ ಸರ್ಕಾರಕ್ಕೆ ಹಾಗೂ ಹೈಕೋರ್ಟ್ ಗೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ತೆರವಿಗೆ ಆದೇಶ ಬಂದ ಹಿನ್ನೆಲೆಯಲ್ಲಿ ಒತ್ತುವರಿ ತೆರವು ಕಾರ್ಯಕ್ಕೆ ಕಂದಾಯ ಇಲಾಖೆ ಮುಂದಾಗಿದೆ.

ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗ ತೆರವಿಗೆ ಸಿದ್ಧತೆ ಮಾಡಿಕೊಂಡು ಹೆಚ್ಡಿಕೆ ತೋಟದ ಮುಂದೆ 4 ಜೆಸಿಬಿ ಯಂತ್ರಗಳು ಸಿದ್ದಗೊಂಡಿವೆ

ಇನ್ನೂ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿಗಳಾದ ಯಶವಂತ್ ವಿ. ಗುರುಕರ್ ಮಾತನಾಡಿ ಕೋರ್ಟ್ ಆದೇಶದಂತೆ ತೆರವು ಕಾರ್ಯಾಚರಣೆ ಮಾಡ್ತಿದ್ದೇವೆ. 14 ಎಕರೆಗು ಹೆಚ್ಚು ಭೂಮಿ ಒತ್ತುವರಿಯಾಗಿದೆ. ಕುಮಾರಸ್ವಾಮಿ ಸೇರಿದಂತೆ ಅವರ ಮನೆತನದಿಂದ ಒತ್ತುವರಿ ಆಗಿದೆ. 10 ಕ್ಕೂ ಹೆಚ್ಚು ಸರ್ವೇ ನಂಬರ್ ಗಳನ್ನ ಪರಿಶೀಲನೆ ಮಾಡಿದ್ದೇವೆ.
ಒತ್ತುವರಿ ತೆರವು ಮಾಡಿ ಕೋರ್ಟ್ ಗೆ ವರದಿ ಕೊಡುತ್ತೇವೆ ಎಂದರು.

ಈ ವೇಳೆ ಎಎಸ್ಪಿ ಸುರೇಶ್, ಎಎಸ್ಪಿ ರಾಮಚಂದ್ರಯ್ಯ, ಎಸಿ ಬಿನೋಯ್, ತಹಶಿಲ್ದಾರ್ ತೇಜಸ್ವಿನಿ, ಸರ್ವೇ ಡಿಡಿಎಲ್ ಆರ್ ಹನುಮೇಗೌಡ ಸೇರಿ ಇತರ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net