ಪಾಲಿಕೆಯಿಂದ ಅತಿಕ್ರಮಣ ತೆರವು ಕಾರ್ಯಾಚರಣೆ

Encroachment clearance operation by the corporation
ವಿಜಯಪುರ ನಗರದ ವಾರ್ಡ್ ನಂ.13ರಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯಿತು.
Published on

ವಿಜಯಪುರ : ಮಹಾನಗರ ಪಾಲಿಕೆಯಿಂದ ವಾರ್ಡ್ ನಂ.13ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‌ಬಿಎಸ್ ಮಾರುಕಟ್ಟೆ ಹತ್ತಿರ ಶುಕ್ರವಾರ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು.

ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್. ಹೊಟೇಲ್ ಹತ್ತಿರ, ಕೆಎಸ್‌ಆರ್‌ಟಿಸಿ ಡಿಪೋ ಪಕ್ಕದಲ್ಲಿ, ಪ್ರವಾಸೋದ್ಯಮ ಮಂದಿರದ ಹಿಂದುಗಡೆ, ಸೈನಿಕ ಶಾಲೆ ರಸ್ತೆಯ ಜಿಮಖಾನಾ ಕ್ಲಬ್ ಹಿಂದೆ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರಸ್ತೆಯಲ್ಲಿ ಜಿಲ್ಲಾ ಕ್ರೀಡಾಂಗಣದ ಹತ್ತಿರ ವೆಂಡಿಂಗ್ ಜೋನ್‌ಗಳನ್ನು ಗುರುತಿಸಲಾಗಿದ್ದು, ಸದರಿ ನಿಗದಿತ ಸ್ಥಳಗಳಲ್ಲಿಯೇ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ-ವಹಿವಾಟು ನಡೆಸುವಂತೆ ತಿಳಿಸಲಾಯಿತು.

ವಲಯ ಕಚೇರಿ-1ರ ವಲಯ ಆಯುಕ್ತ ಸುನೀಲ ಪಾಟೀಲ ಮತ್ತಿತರ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net