ಸರ್ಕಾರಿ ಜಾಗ ಖಾಸಗಿ ವ್ಯಕ್ತಿಯಿಂದ ಅತಿಕ್ರಮಣ

oppo_2
ಹನೂರಿನಲ್ಲಿ ಲಕ್ಷ್ಮಯ್ಯನ ದೊಡ್ಡಿ ಗ್ರಾಮಸ್ಥರು ಶಾಸಕ ಎಂ.ಆರ್ ಮಂಜುನಾಥ್ ಅವರಿಗೆ ಮನವಿ ಮಾಡಿದರು. ರಾಮು, ಸುರೇಶ್, ಮಹೇಶ್ವರಿ, ಶಾಂತಿ, ಸುಶೀಲಾ ಇತರರು ಇದ್ದರು.
Published on

ಹನೂರು: ಖಾಸಗಿ ವ್ಯಕ್ತಿಯೊಬ್ಬರು ಆಕ್ರಮಿಸಿಕೊಂಡಿರುವ ಸರ್ಕಾರಿ ಜಾಗವನ್ನು ತೆರೆವುಗೊಳಿಸುವಂತೆ ಆಗ್ರಹಿಸಿ ತಾಲೂಕಿನ ಲಕ್ಷ್ಮಯ್ಯನದೊಡ್ಡಿ ಗ್ರಾಮಸ್ಥರು ಸೋಮವಾರ ಶಾಸಕ ಎಂ.ಆರ್.ಮಂಜುನಾಥ್ ಅವರಿಗೆ ಮನವಿ ಮಾಡಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಗ್ರಾಮಸ್ಥರು ಶಾಸಕರನ್ನು ಭೇಟಿಯಾದ ಗ್ರಾಮಸ್ಥರು, ಗ್ರಾಮ ಠಾಣಾ ವ್ಯಾಪ್ತಿಗೆ ಸೇರಿದ ಸರ್ಕಾರಿ ಜಾಗದಲ್ಲಿ ಸುಮಾರು 120ಕ್ಕೂ ಹೆಚ್ಚು ಕುಟುಂಬ ಹಲವು ವರ್ಷಗಳಿಂದಲೂ ಶೆಡ್ ನಿರ್ಮಿಸಿಕೊಂಡು ವಾಸ ಮಾಡಲಾಗುತ್ತಿದೆ. ಕೂಲಿಯನ್ನೇ ನಂಬಿ ಜೀವನ ನಡೆಸುತ್ತಿದ್ದು, ಇತ್ತೀಚೆಗೆ ಖಾಸಗಿ ವ್ಯಕ್ತಿಯೊಬ್ಬರು ಈ ಜಾಗ ನಮಗೆ ಸೇರಿದ್ದು ಎಂದು ಆಕ್ರಮಿಸಿಕೊಂಡು ಒಕ್ಕಲೆಬ್ಬಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಬಗ್ಗೆ ಮುತುರ್ವಜಿ ವಹಿಸಿ ಆಕ್ರಮಿಸಿಕೊಂಡಿರುವ ಜಾಗವನ್ನು ತೆರೆವುಗೊಳಿಸಿ ವಾಸಿಸಲು ಅನುಕೂಲ ಕಲ್ಪಿಸಿ ಕೊಡುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಗ್ರಾಮಸ್ಥರಾದ ರಾಮು, ಸುರೇಶ್, ಶರವಣ, ಮುರುಗೇಶ್, ಜೀವಾಳು, ಮಹೇಶ್ವರಿ, ಶಾಂತಿ, ಸುಶೀಲಾ ಹಾಗೂ 50ಕ್ಕೂ ಹೆಚ್ಚು ಮಹಿಳೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net