

ಯಳಂದೂರು: ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದಲ್ಲಿನ ರಸ್ತೆ, ಚರಂಡಿ ಸೇರಿದಂತೆ ಇತರ ಸಮಸ್ಯೆಗಳ ಸಂಬಂಧಪಟ್ಟ ಸಾರ್ವಜನಿಕರ 34 ಕುಂದು ಕೊರತೆಯ ಮನವಿ ಪತ್ರವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಲ್ಲಿಸಿದರು.
ಶನಿವಾರ ಸಂತೇಮರಹಳ್ಳಿ ಪ್ರವಾಸಿ ಮಂದಿರದಲ್ಲಿ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು, ಕೆರೆ, ಕಟ್ಟೆಗಳು, ಗೋಮಾಳಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ, ಇದರಿಂದ ರೈತರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಶಾಸಕರು ಹೆಚ್ಚಿನ ಗಮನ ಹರಿಸಿ ಇಲಾಖೆಯ ವತಿಯಿಂದ ಸರ್ವೇ ಕಾರ್ಯ ಮಾಡಿಸಿ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಗಮನಹರಿಸಬೇಕು, ಜತೆಗೆ ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣಕ್ಕೆ ಆಯ್ಕೆ, ಕೊಳವೆ ಬಾವಿ, ವಿವಿಧ ಅಭಿವೃದ್ಧಿ ನಿಗಮದಿಂದ ದೊರೆಯುವ ಸಾಲ ಸೌಲಭ್ಯಗಳು ಸೇರಿದಂತೆ ಇತರೆ ಕುಂದುಕೊರತೆಗಳ ಬಗ್ಗೆ ಮನವಿ ಸಲ್ಲಿಸಿದರು.
ಅದಕ್ಕೆ ಪತ್ರಿಕ್ರಿಯೆ ನೀಡಿದ ಶಾಸಕರ ಈ ಸಂಬಂಧಪಟ್ಟ ಅರ್ಜಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ನಿಯಮಗಳ ಅನುಸಾರ ಮಾಡುವ ನಿಟ್ಟಿನಲ್ಲಿ ಗಮನಹರಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಕುದೇರು ಹಾಲು ಒಕ್ಕೂಟ ನಿರ್ದೇಶಕ ರೇವಣ್ಣ, ನಿರ್ಮಿತಿ ಕೇಂದ್ರದ ಜೆಇ ನಂದೀಶ್ ಮತ್ತಿತರರು ಹಾಜರಿದ್ದರು.