

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಬ್ಬಿರುವ ರಕ್ತನಾಳದ ಸಮಸ್ಯೆ ಇದ್ದ 41 ವರ್ಷ ಹಾಗೂ 40 ವರ್ಷ ಪ್ರಾಯದ ಇಬ್ಬರಿಗೆ ಮೊದಲ ಬಾರಿಗೆ ಎಂಡೋವೆನಸ್ ಲೇಸರ್ ಶಸಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಶಸಚಿಕಿತ್ಸಾ ತ ಡಾ.ಕಿರಣ್ ಹಾಗೂ ಅರಿವಳಿಕೆ ತಜ್ಞೆ ಡಾ.ಚೈತ್ರಾ ಆರ್. ಶಸಚಿಕಿತ್ಸೆ ನಡೆಸಿದರು. ಶಸಚಿಕಿತ್ಸೆಗೆ ಒಳಗಾದ ಇಬ್ಬರೂ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದಾರೆ.
ಎಂಡೋವೆನಸ್ ಲೇಸರ್ ಶಸಚಿಕಿತ್ಸೆ ಎನ್ನುವುದು ಶಸಚಿಕಿತ್ಸೆ ಇಲ್ಲದೆ ಉಬ್ಬಿರುವ ರಕ್ತನಾಳಗಳಿಗೆ ನೀಡುವ ಚಿಕಿತ್ಸೆಯ ಹೊಸ ವಿಧಾನವಾಗಿದೆ. ಉಬ್ಬಿರುವ ರಕ್ತನಾಳಗಳನ್ನು ತೊಡೆದು ಹಾಕಲು ಇದು ಸುರತ ಮತ್ತು ಪರಿಣಾಮಕಾರಿ ಚಿಕಿತ್ಸೆ. ಈ ಚಿಕಿತ್ಸೆಯ ನಂತರ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ.
ಉಜಿರೆಯ ಎಸ್.ಡಿ.ಎಂ ಮಲ್ಟಿ&ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕಿಯ ಸೇವೆ ದೊರೆಯುತ್ತಿದೆ. ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸಚಿಕಿತ್ಸೆ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಯಶಸ್ವಿ ಶಸಚಿಕಿತ್ಸೆಗಳ ಬಗ್ಗೆ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ.ಹೆಗ್ಗಡೆ ಹಾಗೂ ಡಿ.ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.