ಜಿ. ಸುಬ್ರಾಯ ಭಟ್​ಗೆ ದತ್ತಿನಿಧಿ ಪ್ರಶಸ್ತಿ

G.Su. Bhat
Published on

ಶಿರಸಿ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಕೊಡಮಾಡುವ ದತ್ತಿನಿಧಿ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಸಾಹಿತಿ ಜಿ. ಸುಬ್ರಾಯ ಭಟ್ ಬಕ್ಕಳ ಆಯ್ಕೆ ಆಗಿದ್ದಾರೆ.

ಎರಡು ದಶಕಗಳಿಂದ ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಸಂಘವು ಕನ್ನಡ ಭಾಷೆ, ಸಂಸ್ಕೃತಿ ಕಲೆ ಉಳಿವಿಗೆ ಇತರ ಕನ್ನಡ ಪರ ಸಂಘಟನೆಗಳೊಂದಿಗೆ ಸೇರಿ ಶ್ರಮಿಸುತ್ತಿದೆ. ದುಬೈ ಉದ್ಯಮಿ ಜೋಸೆಫ್ ಮಾಥಿಯಾಸ್ ನೀಡುವ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜು. 13ರಂದು ಕಾಸರಗೋಡಿನಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು , ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಇತರರು ಪಾಲ್ಗೊಳ್ಳುವರು ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ತಿಳಿಸಿದ್ದಾರೆ. ಜಿ. ಸುಬ್ರಾಯ ಭಟ್ ಬಕ್ಕಳ ಅವರಿಗೆ ಪತ್ರಿಕೋದ್ಯಮ ಸೇವೆಗಾಗಿ ಕೆ. ಶಾಮರಾವ್ ಪ್ರಶಸ್ತಿ , ಡಿವಿಜಿ ಪುರಸ್ಕಾರ, ಗಜಲ್ ಸಾಹಿತ್ಯಕ್ಕೆ ಕುವೆಂಪು ಸಾಹಿತ್ಯ ಪುರಸ್ಕಾರ, ಕೌಸ್ತುಭ ಶ್ರೀ ಪ್ರಶಸ್ತಿ ಲಭಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net