ದಂಬೆಕೋಡಿ ಚಿಣ್ಣಪ್ಪ ಹೆಸರಿನಲ್ಲಿ ದತ್ತಿನಿಧಿ

Endowment fund in the name of Dambekodi Chinnappa
Published on

ಮಡಿಕೇರಿ:

ಮಾಜಿ ಸಚಿವ ದಂಬೆಕೋಡಿ ಎ. ಚಿಣ್ಣಪ್ಪ ಹೆಸರಿನಲ್ಲಿ ಅವರ ಪತ್ನಿ ದಂಬೆಕೋಡಿ ಲೀಲಾವತಿ ಚಿಣ್ಣಪ್ಪ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 50 ಸಾವಿರ ರೂ. ದತ್ತಿನಿಧಿ ಸ್ಥಾಪಿಸಿದ್ದಾರೆ. ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಲ್ಲಿ ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಗೌರವಿಸಿ, ನಗದು ಬಹುಮಾನ ಮತ್ತು ಪಾರಿತೋಷಕ ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ದತ್ತಿನಿಧಿ ಸ್ಥಾಪಿಸಲಾಗಿದೆ.

ದತ್ತಿಯ ಮೊತ್ತದ ಚೆಕ್ ಅನ್ನು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಕೆ. ಟಿ. ಬೇಬಿ ಮ್ಯಾಥ್ಯು ಅವರುಗಳು ದಂಬೆಕೋಡಿ ಲೀಲಾವತಿ ಚಿಣ್ಣಪ್ಪರ ಅವರಿಂದ ಸೋಮವಾರ ಸ್ವೀಕರಿಸಿದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net