ದತ್ತಿನಿಧಿ ಉಪನ್ಯಾಸ, ಸಾಹಿತ್ಯ ಜಾಗೃತಿ

Kdb_Awareness
Published on

ಕಡಬ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕ ಮತ್ತು ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ದತ್ತಿನಿಧಿ ಉಪನ್ಯಾಸ ಮತ್ತು ಸಾಹಿತ್ಯ ಜಾಗೃತಿ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಶಿಕ್ಷಕ ಕಿಶೋರ್ ಕುಮಾರ್ ಬಿ. ‘ಅರಳಲಿ ಸಾಹಿತ್ಯದ ಮನಸ್ಸುಗಳು ಬೆಳಗಲಿ ಕರ್ನಾಟಕ’ ಎಂಬ ವಿಷಯದ ಬಗ್ಗೆ ಉಪನ್ಯಾಸಗೈದರು. ರಾಮಕುಂಜೇಶ್ವರ ಆಂಗ್ಲ ಮಾಧ್ಯಮದ ಆಡಳಿತ ಅಧಿಕಾರಿ ಆನಂದ್ ಎಸ್.ಟಿ, ರಾಮಕುಂಜೇಶ್ವರ ವಸತಿ ನಿಲಯದ ವ್ಯವಸ್ಥಾಪಕ ರಮೇಶ್ ರೈ, ತಾಲೂಕು ಕನ್ನಡ ಪರಿಷತ್ ಸದಸ್ಯೆ ಪ್ರೇಮ ಬಿ, ರಮ್ಯಾ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ಹರೀಶ್ ಆಚಾರ್ಯ ನಿರೂಪಿಸಿದರು. ಘಟಕದ ಕೋಶಾಧಿಕಾರಿ ಬಾಲಚಂದ್ರ ಮುಂಚಿತಾಯ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net