ಮತಗಟ್ಟೆಗಳ ಸುತ್ತ 144 ಸೆಕ್ಷನ್ ಜಾರಿ

8 BGV HRBD 1-Web
ಹಿರೇಬಾಗೇವಾಡಿ ಗ್ರಾಮ ಸಂಪರ್ಕಿಸುವ ಪ್ರಮುಖ ರಸ್ತೆಗೆ ಗೇಟ್ ಅಳವಡಿಸಿ ಸಂಚಾರ ನಿಷೇಧಿಸಿರುವುದು.
Published on

ಜುಲೈ 23 ರಂದು ನಡೆಯುವ ಗ್ರಾಮ ಪಂಚಾಯಿತಿ ಉಪಚುನಾವಣೆ 2023ರ ಮತದಾನದ ಸಂಬoಧ ಬೆಳಗ್ಗೆ 6 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯಗೊಂಡು ಮತಗಟ್ಟೆ ಸಿಬ್ಬಂದಿಗಳು ಮತಗಟ್ಟೆಯಿಂದ ತೆರಳುವವರೆಗೆ ಜಿಲ್ಲೆಯ ಕೆಲ ಭಾಗದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಮೈಸೂರು ಜಿಲ್ಲಾ ವ್ಯಾಪ್ತಿಯ ನಂಜನಗೂಡು ತಾಲೂಕಿನ ದೇವನೂರು ಹಾಗೂ ದೇವರಾಯಶೆಟ್ಟಿ, ನರಸೀಪುರ ತಾಲೂಕಿನ ಹೆಮ್ಮಿಗೆ ಹುಣಸೂರು ತಾಲೂಕಿನ ಜಾಬಗೆರೆ, ತಟ್ಟೆಕೆರೆ, ಕಡೆ ಮನುಗನಹಳ್ಳಿ ಕೃಷ್ಣರಾಜನಗರ ತಾಲೂಕಿನ ಹಂಪಾಪುರ, ಹೆಚ್ ಡಿ ಕೋಟೆ ತಾಲೂಕಿನ ಮಾದಾಪುರ ಹಾಗೂ ಎನ್ ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮತದಾನ ನಡೆಯುವ ಎಲ್ಲಾ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ಷರತ್ತುಗಳನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net