ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಿರಿ

ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಿರಿ
Published on

ಅರಸೀಕೆರೆ (ಗ್ರಾಮಾಂತರ): ಕಾಲೇಜು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಹಾಗೂ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಣಕಟ್ಟೆ ವೀರಭದ್ರಸ್ವಾಮಿ ಹೇಳಿದರು.

ತಾಲೂಕಿನ ಕಣಕಟ್ಟೆ ಹೋಬಳಿಯ ದಿಬ್ಬೊರು ಗ್ರಾಮದಲ್ಲಿ ಕಣಕಟ್ಟೆ ಶ್ರೀವಿದ್ಯಾರಣ್ಯ ಪದವಿಪೂರ್ವ ಕಾಲೇಜು ಹಾಗೂ ರಾಷ್ಟ್ರೀಯ ಯೋಜನೆಯ ವಿಶೇಷ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ನಾಯಕತ್ವಗುಣ ಬೆಳೆಸಿಕೊಳ್ಳಲು ಎನ್‌ಎಸ್‌ಎಸ್‌ನಂತಹ ಸಂಘಟನೆಗಳು ಸಹಕಾರಿ ಎಂದರು.

ಕಾಲೇಜಿನ ಗೌರವ ಕಾರ್ಯದರ್ಶಿ ನಾಗೇಶ್ವರರಾವ್ ಮಾತನಾಡಿ, ಮಹಾತ್ಮ ಗಾಂಧಿಯವರ ಪರಿಕಲ್ಪನೆ ರಾಮರಾಜ್ಯ ಕನಸು ನನಸಾಗಬೇಕಾದರೆ ಇಂದಿನ ಯುವ ಪೀಳಿಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಕೊಳ್ಳಬೇಕು ಎಂದರು.

ಕಣಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಮ್ಮ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್, ಮಾಜಿ ಸದಸ್ಯ ಕಾಂತರಾಜು, ಬಿ.ಆರ್.ನಟರಾಜ್, ಪ್ರಾಂಶುಪಾಲ ಶಶಿಕುಮಾರ್, ಹನುಮೇಶ್ ಕೃಷ್ಣ ಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net