ಒತ್ತಡ ತಾಳಲಾರದೆ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಪ್ರಾಣಬಿಟ್ಟ Engineer

Gnanesh
Published on

ಮಂಡ್ಯ: ನೀರಿನ ಟ್ಯಾಂಕ್​ಗೆ ನೇಣು ಬಿಗಿದುಕೊಂಡು ಇಂಜಿನಿಯರ್​ (Engineer) ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಜ್ಞಾನೇಶ್(30) ಎಂದು ಗುರುತಿಸಲಾಗಿದ್ದು, ಇವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹೆಮ್ಮತ್ತಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಮೃತ ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯನಲ್ಲಿ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಜ್ಞಾನೇಶ್ ವಾಟ್ಸ್​​ಆ್ಯಪ್​ನಲ್ಲಿ Work Pressure ಸ್ಟೇಟಸ್​​​ ಹಾಕಿಕೊಂಡಿದ್ದರು. ಈ ಹಿನ್ನೆಲೆ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Engineer Suicide
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net