ಐಪಿಎಲ್ ಬೆಟ್ಟಿಂಗ್‌ಗೋಸ್ಕರ ಬೈಕ್ ಕಳ್ಳತನಕ್ಕೆ ಇಳಿದಿ ಇಂಜಿನಿಯರ್..!

ipl 17 web
Published on

ಮೈಸೂರು: ಐಪಿಎಲ್ ಬೆಟ್ಟಿಂಗ್‌ಗೋಸ್ಕರ ಸಾಲ ಮಾಡಿಕೊಂಡಿದ್ದ ಇಂಜಿನಿಯರ್‌ವೊಬ್ಬ ಸಾಲ ತೀರಿಸಲು ಸಾಧ್ಯವಾಗದೆ ಬೈಕ್ ಕಳ್ಳತನ ನಡೆಸಿ ಮಂಗಳವಾರ ಪೊಲೀಸರ ಅತಿಥಿಯಾಗಿದ್ದಾನೆ.

ಮಂಡ್ಯದ ಗೆಂಡೆಕೊಪ್ಪಲು ಗ್ರಾಮದ ನಿವಾಸಿ ಕೇಶವ(26) ಬಂಧಿತ ಆರೋಪಿ. ಆರೋಪಿಯಿಂದ 1.20 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ. ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಕೇಶವ ಕಳೆದ ಮೂರು ವರ್ಷಗಳಿಂದ ಐಪಿಎಲ್ ಬೆಟ್ಟಿಂಗ್‌ನಲ್ಲಿ ತನ್ನನ್ನು ತೊಡಗಿಸಿಕೊಂಡು 3 ಲಕ್ಷ ರೂ. ಹಣ ಕಳೆದುಕೊಂಡಿದ್ದ. ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ಕಳ್ಳತನ ಮಾಡುತ್ತಿದ್ದ ಸಂದರ್ಭ ಗಸ್ತಿನಲ್ಲಿದ್ದ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕುವೆಂಪುನಗರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net