

ಹಾಸನ: ನಗರದ ಸಾಲಗಾಮೆ ರಸ್ತೆಯಲ್ಲಿರುವ ಎಂಸಿಇ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಗುರುವಾರ ರಾತ್ರಿ ವಿದ್ಯಾರ್ಥಿ ದರ್ಶನ್ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ, ತುರುವೇಕೆರೆ ನಗರದ ನಂಜುಂಡೇಗೌಡ-ಮಮತಾ ದಂಪತಿ ಪುತ್ರ ದರ್ಶನ್, ಹಾಸನಾಂಬ ಬ್ಲಾಕ್‌ನ ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ.
ಸ್ಥಳಕ್ಕೆ ಎಎಸ್‌ಪಿ ವೆಂಕಟೇಶ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿಮ್ಸ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಕಾಲೇಜು ಆವರಣ ಮತ್ತು ಹಾಸ್ಟೆಲ್‌ನಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.