

ಕೆ.ಆರ್.ಸಾಗರ: ಬೆಳಗೊಳದ ಬಲಮುರಿಗೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾವೇರಿ ನದಿಯಲ್ಲಿ ಮುಳುಗಿ ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ.
ಮೈಸೂರು ತಾಲೂಕು ನಾಗನಹಳ್ಳಿ ಗ್ರಾಮದ ಶಿವರಾಜು ಪುತ್ರ ಎಸ್.ಶರತ್ (19)ಮೃತಪಟ್ಟ ಯುವಕ. ಈತ ಪಾಲಹಳ್ಳಿ ಗ್ರಾಮದ ಬಳಿ ಇರುವ ಎಂಆರ್‌ಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ತನ್ನ ಮೂವರು ಸ್ನೇಹಿತರ ಜತೆ ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದು, ಈ ವೇಳೆ ಈಜಲು ಹೋದಾಗ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಕೆ.ಆರ್.ಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮಂದಿನ ಕ್ರಮ ಕೈಗೊಂಡಿದ್ದಾರೆ. ಮೈಸೂರು ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಮೃತದೇಹ ಹಸ್ತಾಂತರಿಸಲಾಯಿತು.