

ಕೋಟ: ಇಂಗ್ಲಿಷ್ ಭಾಷೆ ಪರಿಣಾಮಕಾರಿಯಾಗಿ ಕಲಿಸಲು ಹೊಸ ಹೊಸ ಶೈಕ್ಷಣಿಕ ಪ್ರಯೋಗ ಮಾಡುತ್ತ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಇಂಗ್ಲಿಷ್ ಕಲಿಕೆಗೆ ಸರ್ವ ಸೌಲಭ್ಯ ಒದಗಿಸುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆ ಪ್ರಯತ್ನ ಅಭಿನಂದನೀಯ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಹೆಸಕುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿದ್ಧಪಡಿಸಲಾದ ಅತ್ಯಾಧುನಿಕ ಹ್ಯಾಪಿ ಇಂಗ್ಲಿಷ್ ಲ್ಯಾಂಗ್ವೇಜ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದರು.
ಲ್ಯಾಬ್ ಸಿದ್ಧಪಡಿಸುವಲ್ಲಿ ಪ್ರಮುಖ ಸಹಯೋಗ ಹಾಗೂ ಕೊಡುಗೆ ನೀಡಿದ ಒನ್ ಗುಡ್ ಸ್ಟೆಪ್ ಸಂಸ್ಥೆ ಸ್ಥಾಪಕರು ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಅಮಿತಾ ಪೈ, ದಾನಿ ಗಣೇಶ್ ಪ್ರಸಾದ್ ಕಾಂಚನ್, ನಿವೃತ್ತ ಶಿಕ್ಷಕ ಜಯರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಕೊರ್ಗಿ ಗ್ರಾಪಂ ಅಧ್ಯಕ್ಷ ಉಮಾ ಎಲ್.ಶೆಟ್ಟಿ, ಗ್ರಾಪಂ ಉಪಾಧ್ಯಕ್ಷೆ ಪಲ್ಲವಿ ಕುಲಾಲ, ಸದಸ್ಯ ರಾಘವೇಂದ್ರ ಶೆಟ್ಟಿ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ.ಎನ್., ಶ್ರೀ ವಿನಾಯಕ ದೇವಸ್ಥಾನ ಗುಡ್ಡೆಟ್ಟು ಆಡಳಿತ ಮೊಕ್ತೇಸರ ಅನಂತ ಪದ್ಮನಾಭ ಅಡಿಗ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಉಪ ಪ್ರಾಂಶುಪಾಲ ಅಶೋಕ ಕಾಮತ್, ಕುಂದಾಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕ ರಾಜಾ ಖಾರ್ವಿ, ಹುಣಸೆಮಕ್ಕಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ವಸಂತ್, ಹೆಸಕುತ್ತೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್, ಸಂಜೀವ ಕುಲಾಲ, ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ಎಂ., ಸಹಶಿಕ್ಷಕರಾದ ಜಯಲಕ್ಷ್ಮೀ ಬಿ., ವಿಜಯಾ ಆರ್., ರವೀಂದ್ರ ನಾಯಕ್, ಸ್ವಾತಿ ಬಿ., ಗೌರವ ಶಿಕ್ಷಕಿ ಮಧುರಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹ ಶಿಕ್ಷಕರಾದ ಅಶೋಕ ನಿರೂಪಿಸಿದರು. ವಿಜಯ ಶೆಟ್ಟಿ ವಂದಿಸಿದರು.