

ಬಂಟ್ವಾಳ: ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಜಾಗತಿಕಮಟ್ಟದಲ್ಲಿ ಸ್ಪರ್ಧೆ ಎದುರಿಸುವ ಅಗತ್ಯ ಇರುವುದರಿಂದ ಆಂಗ್ಲ ಭಾಷಾ ಕಲಿಕೆ ಅಗತ್ಯ. ಮೂಡುಪಡುಕೋಡಿಯಂತಹ ಗ್ರಾಮೀಣ ಪರಿಸರದಲ್ಲಿ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಗೊಂಡಿರುವುದು ವಿದ್ಯಾರ್ಥಿಗಳಿಗೆ ವರದಾನ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಸರ್ಕಾರದಿಂದ ನೂತನವಾಗಿ ಅನುಮೋದನೆಗೊಂಡ ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮ ವಿಭಾಗ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.
ಇರ್ವತ್ತೂರು ಗ್ರಾ.ಪಂ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷೆ ಹರಿಣಾಕ್ಷಿ ನಾಗೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಕಯ್ಯಬೆ, ಉಪಾಧ್ಯಕ್ಷೆ ಶಾಲಿನಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಶಿಕ್ಷಣ ಸಂಯೋಜಕಿ ಸುಜಾತಾ ಭಟ್, ಸಿಆರ್‌ಪಿ ಜ್ಯೋತಿ, ಮುಖ್ಯಶಿಕ್ಷಕಿ ಐರಿನ್ ಮಿರಾಂದ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ಬಜೆ, ಕಾರ್ಯದರ್ಶಿ ಸುಪ್ರೀತ್ ಜೈನ್, ಇರ್ವತ್ತೂರು ಗ್ರಾ.ಪಂ ಸದಸ್ಯರಾದ ದಯಾನಂದ ಎರ್ಮೆನಾಡ್, ಶುಭಕರ ಶೆಟ್ಟಿ ಮಠ, ಸುಂದ್ರ ಶೆಟ್ಟಿ, ಪ್ರಶಾಂತ್ ಜೈನ್, ವಿಜಯಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಲೋಕೇಶ್, ಹರೀಶ್, ನವೀನ್ ಸೇವಾ, ವಿಜಯ, ಸೇಸಪ್ಪ, ಶ್ರೀನಿವಾಸ, ಪ್ರಮುಖರಾದ ಡಾ.ರಾಮಕೃಷ್ಣ ಎಸ್, ಶಂಕರ್ ಶೆಟ್ಟಿ ಬೆದ್ರಮಾರ್, ಸತೀಶ್ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಮುಖ್ಯ ಶಿಕ್ಷಕಿ ಸಲ್ಲಿಸಿದರು. ವನಮಹೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು. ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ದೈಹಿಕ ಶಿಕ್ಷಕ ಸುರೇಶ್ ವಂದಿಸಿದರು.