

ವಿಜಯಪುರ:ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಯುವಕರು ಆಟೋಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸದೃಢ ಆರೋಗ್ಯ ಹೊಂದಿ, ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯುವಕರ ಪಾತ್ರ ಅತ್ಯಂತ ಹಿರಿದಾಗಿದೆ. ಕ್ರೀಡಾ ೇತ್ರಕ್ಕೆ ಸರ್ಕಾರ ಹಲವು ಸೌಲಭ್ಯ ಒದಗಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದು, ಇದರ ಸದುಪಯೋಗ ಪಡೆದು ಆಸಕ್ತಿಯುತ ಕ್ರೀಡೆಯಲ್ಲಿ ಸತತ ಪ್ರಯತ್ನ ಹಾಗೂ ಕಠಿಣ ಅಭ್ಯಾಸ ರೂಢಿಸಿಕೊಂಡು ಕ್ರೀಡಾ ಸಾಧಕರಾಗಬೇಕು ಎಂದು ಹೇಳಿದರು.
ರಾಷ್ಟ್ರಪತಿ ಪ್ರಶಸ್ತಿ ಪುರಸತ ಡಾ. ಜಾವೀದ ಜಮಾದಾರ ಮಾತನಾಡಿ, ಕ್ರೀಡಾ ೇತ್ರದಲ್ಲಿ ಹೊಸ ಸಾಧನೆಯ ಬರೆದು ಮೈಲುಗಲ್ಲು ಸ್ಥಾಪಿಸುವ ಮೂಲಕ ಜಿಲ್ಲೆ, ರಾಜ್ಯದ ಕೀರ್ತಿ ಹೆಚ್ಚಿಸಬೇಕು. ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಭಾಗಿಯಾಗಬೇಕು. ಕ್ರೀಡೆಗಳಲ್ಲಿ ಸೋಲು&ಗೆಲುವು ಸಾಮಾನ್ಯ. ಆದರೆ, ಭಾಗವಹಿಸುವುದು ಮುಖ್ಯ ಎಂಬುದು ಮನವರಿಕೆ ಮಾಡಿಕೊಳ್ಳುವ ಜತೆಗೆ ಯುವಕರು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಕೊಳ್ಳುವುದರ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕೆಂದು ಕರೆ ನೀಡಿದರು.
ಪಾಲಿಕೆ ಮೇಯರ್ ಎಂ.ಎಸ್. ಕರಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ಕ್ರೀಡಾ ಇಲಾಖೆ ಕಚೇರಿ ಅಧೀಕ್ಷಕಿ ಪ್ರಿಯಂಕಾ ಜಿ., ಟಿ.ಪಿ. ಆಲೂರು, ಸಂಗೀತಾ ಮಠಪತಿ ಮತ್ತಿತರರಿದ್ದರು.
ವಿಜಯಪುರದ ಡಾ. ಬಿ.ಆರ್. ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ ನೀಡಿದರು. ಸಂಗಮೇಶ ಬಬಲೇಶ್ವರ, ಎಂ.ಎಸ್. ಕರಡಿ, ರಾಕಶೇಖರ ದೈವಾಡಿ ಮತ್ತಿತರರಿದ್ದಾರೆ.