ಕ್ರೀಡೆಯಿಂದ ಬೌದ್ದಿಕ ಸಾಮಾರ್ಥ್ಯ ವೃದ್ಧಿ

20KDR1
Published on

ಕಡೂರು; ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದಾಗ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುಕ್ರವಾರ ದೀಕ್ಷಾ ವಿದ್ಯಾಮಂದಿರ ಶಾಲೆಯ ಸಹಯೋಗದೊಂದಿಗೆ 2024-25ನೇ ಸಾಲಿನ ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಗುಂಪು ಆಟಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಪ್ರಮುಖವಾಗಿಮೊಬೈಲ್ ಗೀಳನ್ನು ಕಳಚಬೇಕಿದೆ. ದೇಹ ದಂಡಿಸುವ ಕ್ರೀಡಾ ಚಟುವಟಿಕೆ ಬೌದ್ದಿಕ ಸಾಮಾರ್ಥ್ಯ ವೃದ್ಧಿಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಗುಂಪು ಆಟಗಳು ಕೇವಲ ಕ್ರೀಡಾಕೂಟಗಳಿಗೆ ಸೀಮಿತವಾಗದೆ ಪ್ರತಿ ನಿತ್ಯ ಅಭ್ಯಾಸಗಳು ನಡೆಸಬೇಕಿದೆ. ಶಿಕ್ಷಕರು ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಹರೀಶ್ ಮಾತನಾಡಿ, ಆರೋಗ್ಯಯುತ ಬದುಕು ರೂಪಿಸಿಕೊಳ್ಳಲು ಕ್ರೀಡೆ ಅತ್ಯವಶ್ಯಕ. ಮಕ್ಕಳನ್ನು ಬಾಲ್ಯದಲ್ಲಿಯೇ ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಭವಿಷ್ಯದಲ್ಲಿ ಕ್ರೀಡಾ ವಿಭಾಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಾಧ್ಯವಾಗಲಿದೆ ಎಂದರು.
ಪುರಸಭೆ ಉಪಾಧ್ಯಕ್ಷ ಮಂಜುಳಾ ಚಂದ್ರು, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ, ದೀಕ್ಷಾ ಶಾಲೆ ಆಡಳಿತಾಧಿಕಾರಿ ನವೀನ್ ಡಿ. ಅಲ್ಮೇಡಾ, ಕೆ.ನಾಗರಾಜಪ್ಪ, ಕ್ರೀಡಾಕಾರಿ ಎಚ್.ಎಲ್.ಮುರುಳಿಧರ್, ಎಂ.ಲಿಂಗರಾಜು, ಬಿ.ಆನಂದಪ್ಪ, ಲತಾಮಣಿ, ಆಂಜನೇಯ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net