

ಬದಿಯಡ್ಕ: ಪೆರ್ಲ ನಾಲಂದ ಕಾಲೇಜು, ನಾಲಂದ ಚಾರಿಟೆಬಲ್ ಟ್ರಸ್ಟ್, ಐಕ್ಯೂಎಸಿ ಆಶ್ರಯದಲ್ಲಿ ಎನ್ನ ಪೊವ್ವಲ್ಲೇ-2ಕೆ25 ಬೀಳ್ಕೊಡುಗೆ ಸಮಾರಂಭ ಮಂಗಳವಾರ ನಡೆಯಿತು.
ಕಾಲೇಜು ಆಡಳಿತ ಮಂಡಳಿ ಸದಸ್ಯ ರಾಜಶೇಖರ ಪೆರ್ಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಂಸ್ಕಾರಯುತ ಶಿಕ್ಷಣಕ್ಕಾಗಿ ಗುರು, ವಿದ್ಯಾಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಗುರುವಿನ ಮಾರ್ಗದರ್ಶನ ವಿದ್ಯಾರ್ಥಿ ಜೀವನದ ದಾರಿದೀಪವಾಗುವುದು ಎಂದರು.
ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ನಾಲಂದ ಕಾಲೇಜು ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಂತಿಮ ಪದವಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಅನುಭವ ಹಂಚಿಕೊಂಡರು. ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಸ್ವಾಗತಿಸಿದರು. ಪ್ರಾರ್ಥನಾ ಭಾರದ್ವಾಜ್ ವಂದಿಸಿದರು. ಝಿನಾನ ನಿರೂಪಿಸಿದರು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.