ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

camp
Published on

ಕಡಬ: ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ ಕುಟ್ರುಪ್ಪಾಡಿ ಗ್ರಾಮದ ವಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು.

ಕರುಣಾಕರ ಗೋಗಟೆ ನಾಡೋಳಿ ಉದಾಟಿಸಿದರು. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿಶ್ವನಾಥ ಶೆಟ್ಟಿ, ಕಡಬ ಮತ್ತು ನೂಜಿಬಾಳ್ತಿಲ ಕ್ಲಸ್ಟರ್ ಸಿ.ಆರ್.ಪಿ ಗಣೇಶ್ ನಡುವಾಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡಬ ತಾಲೂಕು ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ನಿವೃತ್ತ ಪ್ರಾಂಶುಪಾಲ ಇ.ಸಿ.ಚೆರಿಯಾನ್, ಯುವಜನ ಒಕ್ಕೂಟ ಕಡಬ ತಾಲೂಕು ಅಧ್ಯಕ್ಷ ಶಿವಪ್ರಸಾದ್ ಮೈಲೇರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಉಂಡಿಲ ಅತಿಥಿಗಳಾಗಿದ್ದರು.

ಕಾಲೇಜಿನ ಪ್ರಾಂಶುಪಾಲ ವಾಸುದೇವ ಗೌಡ ಕೆ. ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಉಳಿಪು ಧ್ವಜಾರೋಹಣ ನೆರವೇರಿಸಿದರು. ಶಿಬಿರದ ಸಂಚಾಲಕ ಕಾಶಿನಾಥ ಗೋಗಟೆ ಶ್ರಮದಾನ ಉದ್ಘಾಟಿಸಿದರು. ಮುಖ್ಯಶಿಕ್ಷಕಿ ಶೋಭಾವತಿ ಸ್ವಾಗತಿಸಿದರು. ಕಾರ್ಯಕ್ರಮಾಧಿಕಾರಿ ಸಲೀನ್ ಕೆ.ಪಿ. ಪ್ರಾಸ್ತಾವಿಸಿದರು. ಉಪನ್ಯಾಸಕಿ ಲಾವಣ್ಯ ಹೇಮಂತ ಮಂಡೆಕರ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net