ಭ್ರಾತೃತ್ವಕ್ಕೆ ಎನ್ನೆಸ್ಸೆಸ್ ಸಹಕಾರಿ

BRM COLLAGE 25
Published on

ಭರಮಸಾಗರ: ಸೇವಾ ಮನೋಭಾವ, ಶಿಸ್ತು, ಸಂಯಮ, ನಾಯಕತ್ವ, ಭ್ರಾತೃತ್ವ ಗುಣ ಬೆಳವಣಿಗೆಗೆ ಎನ್‌ಎಸ್‌ಎಸ್ ಚಟುವಟಿಕೆಗಳು ಸಹಕಾರಿ ಆಗಿವೆ ಎಂದು ಪ್ರಾಚಾರ್ಯೆ ಡಾ.ಆರ್.ಶಶಿಕಲಾ ಅಭಿಪ್ರಾಯಪಟ್ಟರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎನ್ನೆಸ್ಸೆಸ್ ದಿನಾಚರಣೆ ಮತ್ತು ಸ್ವಯಂ ಸೇವಕರಿಗೆ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಾಪೂಜಿ ಕಾಲೇಜ್ ಪ್ರಾಚಾರ್ಯ ನಿಜಗುಣ ಸ್ವಾಮಿ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಎನ್‌ಎಸ್‌ಎಸ್ ರಹದಾರಿಯಾಗಿದೆ. ವಾರ್ಷಿಕ ವಿಶೇಷ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸಮಾಜದ ಒಂದು ಭಾಗವಾಗಿ ಮತ್ತು ಗ್ರಾಮೀಣ ಬದುಕನ್ನು ಅರಿತು ಉತ್ತಮ ಜೀವನವನದ ಮೌಲ್ಯಗಳನ್ನು ಕಲಿಯುತ್ತಾರೆ ಎಂದು ಹೇಳಿದರು.

ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಲೋಕೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಚಂದ್ರಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಡಾ. ವೀರೇಂದ್ರ ಸ್ವಾಗತಿಸಿದರು. ಪ್ರೊ.ಕೆ.ಎಸ್.ಸೌಮ್ಯಾ ನಿರೂಪಿಸಿದರು. ಪ್ರೊ.ಸತ್ಯನಾರಾಯಣ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net