

ಕುಂದಾಪುರ: ಯೋಗ, ಧ್ಯಾನ ಮತ್ತು ವ್ಯಾಯಾಮ ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ ಎಂದು ಕುಂದಾಪುರ ವಕೀಲ ಟಿ.ಬಾಲಚಂದ್ರ ಶೆಟ್ಟಿ ಹೇಳಿದರು.
ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಶರಣ ಕುಮಾರ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಘಟಕ ಚೇರ್ಮನ್ಸ್ ಕ್ಲಬ್ ಸದಸ್ಯ ಎ.ಶಂಕರ ಐತಾಳ ಶುಭಾಂಶಸನೆಗೈದರು. ಶಾಲಾಡಳಿತಾಧಿಕಾರಿ ವೀಣಾ ರಶ್ಮಿ ಎಂ., ಉಪಪ್ರಾಂಶುಪಾಲ ರಾಮ ದೇವಾಡಿಗ, ಶಿಕ್ಷಕರು ಉಪಸ್ಥಿತರಿದ್ದರು.
ಎಐಸಿಎಸ್ ಮಟ್ಟದ ವಿವಿಧ ಪಂದ್ಯಾವಳಿ ವಿಜೇತರಿಗೆ, ವಿವಿಧ ಸಂಸ್ಥೆಗಳು ಏರ್ಪಡಿಸಿದ್ದ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ವಿದ್ಯಾರ್ಥಿನಿ ಅರುಣಾ ಸ್ವಾಗತಿಸಿದರು. ಶಿಕ್ಷಕಿಯರಾದ ಅಶ್ವಿನಿ, ಪ್ರತೀಕ್ಷಾ, ರಂಜಿತಾ, ಪೂರ್ಣಿಮಾ ಹಾಗೂ ಸಂಗೀತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಮಯೂರ ಎಸ್.ಕೆ. ವಂದಿಸಿದರು. ವಿದ್ಯಾರ್ಥಿನಿ ಜಾನ್ವಿ ವಿ.ಎಚ್. ಕಾರ್ಯಕ್ರಮ ನಿರೂಪಿಸಿದರು.