

ವಿಜಯಪುರ: ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಅವರಿಗೆ ಸಿಗುವ ಸರ್ಕಾರಿ ಸೌಲಭ್ಯ ಪಡೆಯಬೇಕೆಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹೇಳಿದರು.
ಬಬಲೇಶ್ವರ ಪಟ್ಟಣದ ಸರ್ಕಾರಿ ಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಪ್ರಾರಂಭೋತ್ಸಕ್ಕೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಣ ನೀಡಿದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.
ನಂತರ ಮಕ್ಕಳಿಗೆ ಸಾಂಕೇತಿಕವಾಗಿ ಫಲ ಪುಷ್ಪದ ಜತೆಗೆ ಪಠ್ಯ&ಪುಸ್ತಕ ಮತ್ತು ಸಮವಸಗಳನ್ನು ವಿತರಿಸಲಾಯಿತು.
ಗ್ರಾಮೀಣ ವಲಯದ ಬಿಇಒ ಪ್ರಮೋದಿನಿ ಬಳೋಲಮಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಶ್ರೀಶೈಲ ಮಂಗಳವೆಡೆ, ಮುಖ್ಯ ಗುರು ಎಚ್.ವಿ. ಮಾಲಗಾರ, ಅಶೋಕ ಬೂದಿಹಾಳ, ಇಸಿಒ ಪ್ರಭು ಬಿರಾದಾರ, ವಿಜಯಲಕ್ಷಿ$್ಮ ಪಾಟೀಲ ಇದ್ದರು.
ಮಕ್ಕಳಿಗೆ ಸಿಹಿ ತಿನ್ನಿಸಿ ಸ್ವಾಗತ. : ತಿಕೋಟಾ ಪಟ್ಟಣದ ಕನ್ನಡ ಗಂಡು ಹಾಗೂ ಹೆಣ್ಣು ಮಕ್ಕಳ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ತಿನಿಸುವ ಮೂಲಕ ಶಿಣ ಸಂಯೋಜಕ ರವೀಂದ್ರ ಚಿಕ್ಕಮಠ ಮತ್ತು ಜಿ.ಟಿ. ಕಾಗವಾಡ ಶಾಲಾ ಪ್ರಾರಂಭೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಿದರು. ಶಾಲೆ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಟ್ರಾಕ್ಟರ್ ಮೂಲಕ ದಾಖಲಾತಿ ಆಂದೋಲನ ನಡೆಯಿತು. ಮುಖ್ಯಗುರು ವೈ.ಬಿ. ವಾಲಿಕಾರ, ವಿ.ಎಂ. ಸವನಳ್ಳಿ, ಸಿಆರ್ಪಿ ಸುಜಾತಾ ಬಾಗಲಕೋಟ, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರ ವೃಂದವರು ಮತ್ತಿತರರಿದ್ದರು.