ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ

nrp sanamana
ಮುತ್ತಿನಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿ ಅವನಿ ಎಂ. ಗೌಡ ಅವರನ್ನು ಪುರಸ್ಕರಿಸಲಾಯಿತು. ಶಶಿಧರ್, ಎಚ್.ಎಂ.ಗಂಗಾಧರ್, ಸಿ.ಮನೋಹರ್, ಎಂ.ಡಿ.ಪ್ರಶಾಂತ್ ಇತರರಿದ್ದರು.
Published on

ಎನ್.ಆರ್.ಪುರ: ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಶಿಧರ್ ತಿಳಿಸಿದರು.

ಮುತ್ತಿನಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ, 8ನೇ ತರಗತಿ ಮಕ್ಕಳಿಗೆ ಸ್ವಾಗತ ಹಾಗೂ 2024 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಸರ್ಕಾರಿ ಪ್ರೌಢಶಾಲೆ ಅವನಿ ಎಂ. ಗೌಡ ಅವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮುತ್ತಿನಕೊಪ್ಪ ಸರ್ಕಾರಿ ಪ್ರೌಢಶಾಲೆ ಸಾಧನೆ ಮಾಡಿದೆ ಎಂದರು.
ಮುತ್ತಿನಕೊಪ್ಪ ಪ್ರೌಢಶಾಲೆ ಹಿರಿಯ ಶಿಕ್ಷಕ ಎಚ್.ಎಂ.ಗಂಗಾಧರಪ್ಪ ಮಾತನಾಡಿ, ವಿದ್ಯಾರ್ಥಿ ಸಂಘಗಳು ವರ್ಷವಿಡೀ ಸಕ್ರಿಯವಾಗಿ ಕಾರ್ಯ ನಿರ್ವಹಿಸಿ ಪಠ್ಯೇತರ ವಿಷಯಗಳಲ್ಲೂ ಯಶಸ್ಸು ಸಾಧಿಸಬೇಕು ಎಂದು ಹೇಳಿದರು.
ಅವನಿ ಎಂ. ಗೌಡ ಅವರ ಪಾಲಕ ಸಿ.ಮನೋಹರ್ ಮಾತನಾಡಿ, ಪಾಲಕರ ಎದುರು ಮಕ್ಕಳಿಗೆ ಸನ್ಮಾನ ಸಿಕ್ಕರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಸಿಗುವುದಿಲ್ಲ. ಎಲ್ಲ ಮಕ್ಕಳೂ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಿ ಪಾಲಕರಿಗೆ ಕೀರ್ತಿ ತರಬೇಕು ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಎಂ.ಡಿ.ಪ್ರಕಾಶ್, ಸದಸ್ಯರಾದ ಮಂಜುನಾಥ್, ವರ್ಗೀಸ್, ಮಮ್ತಾಜ್, ಶಿಕ್ಷಕ ಚಂದ್ರಪ್ಪ, ಶಿವಾನಂದ, ಪ್ರಶಾಂತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net