

ವಿಜಯಪುರ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರು ಬೋಧನೆ ಮಾಡುವುದಲ್ಲದೇ ಬಿಸಿಯೂಟ, ಪಠ್ಯಪುಸ್ತಕ, ಸಮವಸ ಸೇರಿ ಎಲ್ಲ ಸೌಲಭ್ಯಗಳೂ ಇದ್ದು, ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು. ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸಬೇಕು ಎಂದು ಮುಖ್ಯಶಿಕ್ಷಕ ಮನೋಹರ್ ತಿಳಿಸಿದರು.
ಪಟ್ಟಣದಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಮಾದರಿ ಶಾಲೆ ಪುನರಾರಂಭ ಹಿನ್ನೆಲೆಯಲ್ಲಿ ಮಕ್ಕಳಿಗೆ ಹೂವು, ನೀಡಿ, ಸ್ವಾಗತಿಸಿ ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಓದುವುದರಿಂದ ಉತ್ತಮ ಸಿಬ್ಬಂದಿ ಅಲ್ಲದೇ ಯೋಗ, ಕರಾಟೆ, ಕಂಪ್ಯೂಟರ್ ಶಿಕ್ಷಣವನ್ನು ಉಚಿತವಾಗಿ ಪಡೆಯಬಹುದು. ಪಿಎಂಶ್ರೀ ಯೋಜನೆಗೆ ಒಳಪಡಬಹುದು. ಹಾಗಾಗಿ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದರು.
ಎಸ್ಡಿಎಂಸಿ ಅಧ್ಯೆ ರಾಧಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣವಲ್ಲದೇ ಹಲವು ಸೌಲಭ್ಯಗಳಿದ್ದು, ಲಾಂತರ ರೂಪಾಯಿ ಕೊಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಓದಿಸುವ ಬದಲು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದರು.
ಉನ್ನತಿಕರಿಸಿದ ಶಾಲೆ : ಖಾಸಗಿ ಶಾಲೆಗಳ ಮಾದರಿಯಲ್ಲಿಯೇ ಸರ್ಕಾರಿ ಶಾಲೆಗಳನ್ನು ಉನ್ನತಿಕರಿಸಲಾಗುತ್ತಿದೆ. ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಿ, ಇದೀಗ ಹೋಬಳಿಮಟ್ಟದಲ್ಲಿ ಮೂಲ ಸೌಕರ್ಯಗಳಿರುವ ಸಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತಿಕರಿಸುತ್ತಿದೆ ಎಂದು ಮುಖ್ಯಶಿಕ್ಷಕರು ಹೇಳಿದರು.