

ರಾಯಚೂರು: ಈಶಾನ್ಯ ಪದವೀಧರ ಮತ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಮತ ಚಲಾಯಿಸಲು ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮುಂದೆ ಬರಬೇಕು ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾೀಶ ಮಾರುತಿ ಬಗಾಡೆ ಹೇಳಿದರು.
ಸ್ಥಳೀಯ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಮತ್ತು ಜಿಲ್ಲಾಡಳಿತದಿಂದ ಗುರುವಾರ ಏರ್ಪಡಿಸಿದ್ದ ಮತದಾರರ ವಿಶೇಷ ನೋಂದಣಿ ಅಭಿಯಾನ ಉದ್ಘಾಟಿಸಿ ಮತನಡಿ, ಮತದಾನ ಮಾಡುವ ಮೂಲಕ ಪ್ರತಿಯೊಬ್ಬರು ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪದವೀಧರರು ಮತ ಚಲಾಯಿಸಲು ಪ್ರತಿ ಚುನಾವಣೆ ಮುಂಚೆ ಹೆಸರು ನೋಂದಾಯಿಸಿಕೊಳ್ಳಬೇಕಾಗಿದ್ದು, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವ ಮೂಲಕ ಮತ ಚಲಾಯಿಸಲು ಮುಂದೆ ಬರಬೇಕು ಎಂದು ಹೇಳಿದರು.
ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಮಾತನಾಡಿ, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ನ.6ರವರೆಗೆ ಅವಕಾಶ ಕಲ್ಪಿಸಲಾಗಿದೆ. ನ.23ಕ್ಕೆ ಮತದಾರರ ಕರಡು ಪಟ್ಟಿ ಪ್ರಕಟವಾಗುತ್ತಿದ್ದು, ಅದಾದ ನಂತರ ಡಿ.9ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗುವುದು. ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನ್ಯಾಯಾೀಶರಾದ ಜಗದೀಶ, ಅತ್ತಿಕಾಳು ಪ್ರಭು, ದಯಾನಂದ ಬೇಲೂರೆ, ಸಹಾಯಕ ಆಯುಕ್ತೆ ಮಹೆಬೂಬಿ, ತಹಸೀಲ್ದಾರ್ ಸುರೇಶ ವರ್ಮಾ, ವಕೀಲರ ಸಂಘದ ಅಧ್ಯಕ್ಷ ಎನ್.ಭಾನುರಾಜ, ಕಾರ್ಯದರ್ಶಿ ಉದಯಕುಮಾರ ಉಪಸ್ಥಿತರಿದ್ದರು.