

ಕೊಪ್ಪಳ:ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಚುಣಾವಣೆ ನಡೆಯಲಿದ್ದು, ಪದವೀಧರರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳವಂತೆ ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ ಮನವಿ ಮಾಡಿದರು.
ನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಮತದಾರರ ವಿಶೇಷ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿಪ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಹಿಂದೆ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿದ್ದರೂ ಈ ಬಾರಿ ಮತ್ತೊಮ್ಮೆ ನೋಂದಣಿ ಮಾಡಿಕೊಳ್ಳಬೇಕು. ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ತಹಸೀಲ್ದಾರ್ ವಿಠ್ಠಲ ಚೌಗಲಾ ಮಾತನಾಡಿ, ಮತದಾರರಿಗೆ ಅಗತ್ಯ ಜಾಗೃತಿ ಕಾರ್ಯಕ್ರಮ ಕೈಗೊಳ್ಳಿ. ಗ್ರಾಪಂವಾರು ಸ್ವೀಪ್ ಚಟುವಟಿಕೆ ನಡೆಸುವಂತೆ ಸೂಚಿಸಿದರು.
ತಾಪಂ ಇಒ ದುಂಡಪ್ಪ ತುರಾದಿ ಮಾತನಾಡಿ,ಪ್ರತಿ ಗ್ರಾಪಂನಲ್ಲಿ ಜಾಗೃತಿ ಕಾರ್ಯಕ್ರಮ ಜರುಗಿಸಲು ಪಿಡಿಒಗಳಿಗೆ ಸೂಚಿಸಲಾಗಿದೆ. ಅರ್ಹ ಪದವೀಧರರು ಹೆಚ್ಚಿನ ಪ್ರಮಾಣದಲ್ಲಿ ನೋಂದಣಿ ಮಾಡಿಸಬೇಕು. ಅದಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.
ತಹಸೀಲ್ ಕಚೇರಿಯಿಂದ ಅಶೋಕ ವೃತ್ತ, ದಿವಟರ ವೃತ್ತ ಮಾರ್ಗವಾಗಿ ತಾಪಂ ಕಚೇರಿವರೆಗೆ ಜಾಥಾ ನಡೆಸಲಾಯಿತು. ಪದವಿ ಪಡೆದ ನೌಕರರು ಮತದಾರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ಅರ್ಜಿ ಸಲ್ಲಿಸಿದರು.
ತಾಪಂ ಸಹಾಯಕ ನಿರ್ದೇಶಕ ಮಹೇಶ ಎಚ್., ತಾಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ಉಪ ತಹಸೀಲ್ದಾರ್ ರೇಖಾ ದೀಕ್ಷಿತ್ ಇತರರಿದ್ದರು.